– ಇಂದು ವರದಿ ಸಲ್ಲಿಸಿದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ
ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು (ಗುರುವಾರ) ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸಲ್ಲಿಸಿದೆ.
Advertisement
18,000 ಕ್ಕೂ ಅಧಿಕ ಪುಟಗಳ ಸುದೀರ್ಘ ವರದಿಯನ್ನು ಸಮಿತಿಯು ರಾಷ್ಟ್ರಪತಿಗಳಿಗೆ ಇಂದು ಬೆಳಗ್ಗೆ ಸಲ್ಲಿಸಿದೆ. ವರದಿ ಸಲ್ಲಿಕೆಗೆ 191 ದಿನಗಳ ಸಮಯವನ್ನು ಸಮಿತಿ ತೆಗೆದುಕೊಂಡಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ ಸಂಗ್ರಹ ಸಂಗ್ರಹಿಸಲಾಗಿದೆ. ಇದನ್ನೂ ಓದಿ: ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಅವಕಾಶವಿಲ್ಲ: ಅಮಿತ್ ಶಾ ಸ್ಪಷ್ಟನೆ
Advertisement
Advertisement
ಒಂದು ರಾಷ್ಟ್ರ, ಒಂದು ಚುನಾವಣೆ (One Nation One Election) ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.
Advertisement
ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ. ಇದನ್ನೂ ಓದಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ. ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು.