ರಾಮ್ ಪೋತಿನೇನಿ ನಟನೆಯ ‘ಡಬಲ್ ಇಸ್ಮಾರ್ಟ್’ ಚಿತ್ರದ ಸಾಂಗ್ ರಿಲೀಸ್

Public TV
1 Min Read
ram pothineni

ತೆಲುಗಿನ ನಟ ರಾಮ್ ಪೋತಿನೇನಿ (Ram Pothineni) ಮತ್ತು ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ‘ಡಬಲ್ ಇಸ್ಮಾರ್ಟ್’ ಶೂಟಿಂಗ್ ಭರದಿಂದ ಸಾಗುತ್ತಿದೆ.

ram pothineni 1

‘ಸ್ಟೆಪ್ಪಾ ಮಾರ್’ ಎಂಬ ಹಾಡಿಗೆ ಭಾಸ್ಕರ ಭಟ್ಲರ ಸಾಹಿತ್ಯ ಬರೆದಿದ್ದು, ಅನುರಾಗ್ ಕುಲಕರ್ಣಿ ಹಾಗೂ ಸಾಹಿತಿ ಚಂಗಂತಿ ಧ್ವನಿಯಾಗಿದ್ದಾರೆ. ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಅದ್ಧೂರಿ ಸೆಟ್‌ನಲ್ಲಿ ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ರಾಮ್ ಪೋತಿನೇನಿ ಜಬರ್‌ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

kavya thapar actor

ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ (Sanjay Dutt) ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಪ್ರಕರಣವನ್ನು ವಿಧಿಯಾಟ ಅಂತೀನಿ, ಸತ್ತವನಂತೂ ಒಳ್ಳೆಯವನಲ್ಲ: ವಿ.ಮನೋಹರ್

ram pothineni

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.

Share This Article