‘ಡಬಲ್ ಇಸ್ಮಾರ್ಟ್’ ಸಿನಿಮಾದ ‘ಸ್ಟೆಪ್ಪಮಾರ್’ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ‘ಮಾರ್ ಮುಂತಾ ಚೋಡ್ ಚಿಂತಾ’ ಎಂಬ ಹಾಡಿಗೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಮತ್ತು ನಾಯಕಿ ಕಾವ್ಯಾ ಥಾಪರ್ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಶ್ಯಾಮ್ ಬರೆದ ಸಾಹಿತ್ಯಕ್ಕೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ‘ಮಾರ್ ಮುಂತಾ ಚೋಡ್ ಚಿಂತಾ’ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ. ಇದನ್ನೂ ಓದಿ:ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್
‘ಇಸ್ಮಾರ್ಟ್ ಶಂಕರ್’ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪುರಿ ಜಗನ್ನಾಥ್ ಹೊಸ ರೀತಿಯಲ್ಲಿ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕಮರ್ಷಿಯಲ್ ಆಗಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ‘ಡಬಲ್ ಇಸ್ಮಾರ್ಟ್’ (Double Ismart Film) ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.
- Advertisement
- Advertisement
ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್ ಪೋತಿನೇನಿ ನಟಿ ಕಾವ್ಯಾ ಥಾಪರ್ (Kavya Thapar) ಜೋಡಿ ಆಗಿದ್ದಾರೆ. ಸಂಜಯ್ ದತ್ (Sanjay Dutt) ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ‘ಡಬಲ್ ಇಸ್ಮಾರ್ಟ್’ ಸಿನಿಮಾದ ಶೂಟಿಂಗ್ ಇನ್ನು ನಡೆಯುತ್ತಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆ ಇದೆ.