ಪುರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ‘ಡಬಲ್ ಇಸ್ಮಾರ್ಟ್’ (Double Ismart) ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಎರಡು ಸಾಂಗ್ಸ್ ಭರ್ಜರಿ ಹಿಟ್ ಆಗಿದ್ದು, ಇದೀಗ ‘ಕ್ಯಾ ಲಫ್ಡಾ’ ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ರಾಮ್ ಪೋತಿನೇನಿ (Ram Pothineni) ಮತ್ತು ಕಾವ್ಯಾ ಥಾಪರ್ (Kavya Thapar) ಮಿಂಚಿದ್ದಾರೆ.
‘ಕ್ಯಾ ಲಫ್ಡಾ’ ಹಾಡಿಗೆ ಸಂಗೀತ ನಿರ್ದೇಶಕ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಶ್ರೀ ಹರ್ಷ ಇಮಾನಿ ಸಾಹಿತ್ಯ ಬರೆದಿದ್ದು, ಧನುಂಜಯ್ ಸೀಪಾನ ಮತ್ತು ಸಿಂಧೂಜಾ ಶ್ರೀನಿವಾಸನ್ ಧ್ವನಿಯಾಗಿದ್ದಾರೆ. ಈ ಹಾಡಿನಲ್ಲಿ ‘ಕ್ಯಾ ಲಫ್ಡಾ’ ರಾಮ್ ಮತ್ತು ಕಾವ್ಯಾ ನಡುವಿನ ಕೆಮಿಸ್ಟ್ರೀ ಪ್ರೇಕ್ಷಕರಿಗೆ ಇಷ್ಟವಾಗಿದೆ. ಇದನ್ನೂ ಓದಿ:ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್
View this post on Instagram
ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.
‘ಡಬಲ್ ಇಸ್ಮಾರ್ಟ್’ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಅಂದಹಾಗೆ, 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.