ನವದೆಹಲಿ: ಅಯೋಧ್ಯೆಯ ರಾಮಮಂದಿರ (Ayodhya Ram temple) ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. 2024ರ ಜನವರಿ 1ರಂದು ರಾಮಮಂದಿರ ಲೋಕಾರ್ಪಣೆ ಆಗಲಿದೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ (Amit Shah) ಘೋಷಣೆ ಮಾಡಿದ್ದಾರೆ.
ತ್ರಿಪುರಾದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅಮಿತ್ ಶಾ, ರಾಹುಲ್ ಬಾಬಾ(Rahul Gandhi) ಕೇಳಿ, 2024ರ ಜನವರಿ 1 ರಂದು ಬೃಹತ್ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ
#WATCH | Congress hindered the construction of Ram Temple in courts…After the SC verdict came, Modiji began the construction of the temple…Ram Temple will be ready on 1st January 2024: Union Home minister Amit Shah in Tripura pic.twitter.com/d7lZ8eegwS
— ANI (@ANI) January 5, 2023
ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್(Congress) ಮತ್ತು ಸಿಪಿಐ(ಎಂ) ಅಡ್ಡಿಪಡಿಸಿ ಸಮಸ್ಯೆಯನ್ನು ದೀರ್ಘಕಾಲದವರೆಗೆ ನ್ಯಾಯಾಲಯದ ವ್ಯಾಪ್ತಿಯಲ್ಲಿ ಇರಿಸಿತ್ತು. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಮೋದಿಯವರು ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಿದರು ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ (Lok Sabha Election) ನಡೆಯುವ ಮೊದಲೇ ರಾಮ ಮಂದಿರ ಉದ್ಘಾಟನೆಯಾಗಲಿದೆ. ಪ್ರತಿ ಚುನಾವಣೆ ಸಂದರ್ಭದಲ್ಲಿ ಬಿಡುಗಡೆಯಾಗುವ ಪ್ರಣಾಳಿಕೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಭರವಸೆ ನೀಡುತ್ತಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k