5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ರೂ. ತೆರಿಗೆ ಪಾವತಿ!

Public TV
1 Min Read
Ayodhya Ram Mandir On new year 2025

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Shri Ram Janmabhoomi Teerth Kshetra Trust) ಕಳೆದ ಐದು ವರ್ಷಗಳಲ್ಲಿ ಸುಮಾರು 400 ಕೋಟಿ ರೂ. ತೆರಿಗೆ (Tax) ಪಾವತಿಸಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.

2020ರ ಫೆ.5ರಿಂದ 2025 ಫೆ.5ರ ವರೆಗೆ ಈ ಮೊತ್ತದ ತೆರಿಗೆಯನ್ನು ಪಾವತಿಸಲಾಗಿದೆ. ಇದರಲ್ಲಿ 270 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸಲಾಗಿದೆ. ಉಳಿದ 130 ಕೋಟಿ ರೂ. ವಿವಿಧ ತೆರಿಗೆ ವರ್ಗಗಳ ಅಡಿಯಲ್ಲಿ ಪಾವತಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್‌ಗಿಂತ ದೊಡ್ಡ ಸ್ವಯಂಸೇವ ಸಂಘ ವಿಶ್ವದಲ್ಲಿಲ್ಲ: ಮೋದಿ ಗುಣಗಾನ

ಹಿಂದಿನ ವರ್ಷಕ್ಕೆ ಹೋಲಿಸಿದರೆ ಅಯೋಧ್ಯೆಗೆ (Ayodhya) ಬರುವ ಭಕ್ತರು ಮತ್ತು ಪ್ರವಾಸಿಗರಲ್ಲಿ ಹತ್ತು ಪಟ್ಟು ಹೆಚ್ಚಳವಾಗಿದೆ. ಇದು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವಾಗಿ ಮಾರ್ಪಟ್ಟಿದ್ದು, ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಮಹಾಕುಂಭದ ಸಮಯದಲ್ಲಿ 1.26 ಕೋಟಿ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದರು. ಕಳೆದ ವರ್ಷ ಅಯೋಧ್ಯೆಗೆ 16 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರು.

ಟ್ರಸ್ಟ್‌ನ ಹಣಕಾಸು ದಾಖಲೆಗಳನ್ನು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಅಧಿಕಾರಿಗಳು ನಿಯಮಿತವಾಗಿ ಲೆಕ್ಕಪರಿಶೋಧಿಸುತ್ತಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2002ರ ಗುಜರಾತ್‌ ಗಲಭೆಯೇ ದೇಶದ ಅತಿದೊಡ್ಡ ಗಲಭೆಯಲ್ಲ – ರೈಲು ದುರಂತ ಸ್ಮರಿಸಿದ ಮೋದಿ

Share This Article