ಬೆಂಗಳೂರು: ಇತಿಹಾಸಕಾರ, ಅಂಕಣಕಾರ ಡಾ. ರಾಮಚಂದ್ರ ಗುಹಾ (Ramachandra Guha) ಅವರಿಗೆ ಕರ್ನಾಟಕ ಸರ್ಕಾರದ (Karnataka Government) 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ (Mahatma Gandhi Seva Award 2024) ಲಭಿಸಿದೆ.
ಗಾಂಧೀಜಿಯವರ (Mahatma Gandhi) ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡುವ ಈ ಪ್ರಶಸ್ತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುತ್ತದೆ.
ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಡಾ. ರಾಮಚಂದ್ರ ಗುಹಾ ಅವರನ್ನು ಪ್ರಶಸ್ತಿ ಆಯ್ಕೆ ಮಾಡಿದೆ. ಇದನ್ನೂ ಓದಿ: ಇದನ್ನೂ ಓದಿ: ಕಾಂತಾರದ ನಂತರದ What Next? – ಪ್ರಶ್ನೆಗೆ ಉತ್ತರ ನೀಡಿದ ರಿಷಭ್ ಶೆಟ್ಟಿ
ರಾಮಚಂದ್ರ ಗುಹಾ ಪ್ರಮುಖ ಕೃತಿಗಳು:
India After Gandhi (ಸ್ವಾತಂತ್ರ್ಯಾನಂತರ ಭಾರತದ ಇತಿಹಾಸ)
A Corner of a Foreign Field (ಭಾರತೀಯ ಕ್ರಿಕೆಟ್‌ನ ಸಾಮಾಜಿಕ ಇತಿಹಾಸ)
Gandhi Before India (ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆಯ ಮೊದಲ ಭಾಗ)
Gandhi: The Years That Changed the World (ಜೀವನಚರಿತ್ರೆಯ ಎರಡನೇ ಭಾಗ)
The Unquiet Woods (ತಳಸ್ಥರದ ಪರಿಸರ ಚಳವಳಿಗಳ ಅಧ್ಯಯನ)