ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ರಂಜಾನ್ ಆರಂಭವಾಗಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ ಕಾಣಿಸಿಕೊಂಡಿದ್ದು, ಮುಸ್ಲಿಂ ಬಾಂಧವರು ಉಪವಾಸ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ.
ಕಳೆದ ವರ್ಷ ಕೊರೊನಾ 2ನೇ ಅಲೆಯಿಂದಾಗಿ ಮನೆ-ಮನೆಗೆ ಸೀಮಿತಗೊಳಿಸಿದ್ದ ರಂಜಾನ್ ಪ್ರಾರ್ಥನೆಯನ್ನು ಈ ಬಾರಿ ಅದ್ಧೂರಿಯಿಂದ ಆಚರಿಸುವ ಉತ್ಸಾಹದಲ್ಲಿದ್ದಾರೆ. ಅದಕ್ಕಾಗಿ ಮಾರುಕಟ್ಟೆಗಳಿಗೆ ಇಂದಿನಿಂದಲೇ ಭೇಟಿ ನೀಡುತ್ತಿದ್ದು, ಮುಸ್ಲಿಂ ಬಾಂಧವರು ತಮಗಿಷ್ಟದ ಉಡುಪು, ಅಲಂಕಾರಿಕ ವಸ್ತುಗಳು, ಮಹಿಳೆಯರು ಕುರ್ತಾ, ಬುರ್ಕಾ ಹಬ್ಬದ ಅಡುಗೆಗೆ ಬೇಕಾದ ದಿನಸಿ, ಕರ್ಜೂರ, ಬಾದಾಮಿ ಹೀಗೆ ನೆಚ್ಚಿನ ಸಿಹಿ ತಿನಿಸುಗಳನ್ನೂ ಖರೀದಿಸಲು ಸಜ್ಜಾಗುತ್ತಿದ್ದಾರೆ.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರೂ ರಂಜಾನ್ (ಈದ್ ಉಲ್‌ಫ್ರಿತ್)ಗೆ ಶುಭ ಆರೈಸಿದ್ದಾರೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು, ಈ ಪವಿತ್ರ ತಿಂಗಳಲ್ಲಿ ಬಡವರ ಸೇವೆ ಮಾಡಲು ಜನರನ್ನು ಪ್ರೇರೇಪಿಸಲಿ. ನಮ್ಮ ಸಮಾಜದಲ್ಲಿ ಶಾಂತಿ, ಸಮಾನತೆ, ಸೌಹಾರ್ದತೆ ಇನ್ನಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ
Advertisement
ರಂಜಾನ್ ಉಪವಾಸ ಆಚರಣೆ ಏಕೆ?
ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ, ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಇಸ್ಲಾಮಿನ ತರಾವೀಹ್, ನಮಾಜ್, ಉಪವಾಸ, ಝಕಾತ್ (ದಾನ), ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.
Advertisement
ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ. ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ ತರಾವೀಹ್ ನಮಾಜ್‌ಗಳಲ್ಲಿ ಪವಿತ್ರ ಕುರಾನ್ ಪಠಿಸಲಾಗುತ್ತದೆ. ಕುರಾನ್‌ನನ್ನು ಸಂಪೂರ್ಣವಾಗಿ ಬಾಯಿಪಾಠ ಮಾಡಿರುವವರು ಈ ನಮಾಜ್‌ಗೆ ನೇತೃತ್ವ ವಹಿಸುತ್ತಾರೆ. ಇದನ್ನೂ ಓದಿ: ಹಿಜಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್ ಖಾನ್
ಮನುಷ್ಯನನ್ನು ಅನ್ಯಚಿತ್ತದೆಡೆಗೆ ಕೊಂಡೊಯ್ಯುವ ಮಾರ್ಗವನ್ನು ಮುಚ್ಚಿ, ಒಳಿತಿನ ಬಗ್ಗೆ ಮಾತ್ರ ಚಿಂತಿಸುವಂತೆ ಮಾಡುವುದು ರಂಜಾನ್ ಮಾಸದ ವಿಶೇಷ. ಹಾಗಾಗಿಯೇ ಈ ಮಾಸದಲ್ಲಿ ಅಲ್ಲಾನ ಪ್ರೀತಿಗಳಿಸುವ ಇಚ್ಛೆಯೊಂದಿಗೆ ಆಹಾರ, ಮದ್ಯ ಸೇವನೆಯನ್ನೂ ತ್ಯಜಿಸುತ್ತಾರೆ. ಕಾಮಾಸಕ್ತಿ, ಮನರಂಜನೆಯಿಂದ ದೂರವಿದ್ದು, ದುಡಿಮೆ ನಂಬಿ ಬದುಕುತ್ತಾರೆ. ಇದನ್ನೂ ಓದಿ: ಹಿಜಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್
ಈ ಮಾಹೆಯಲ್ಲಿ ದಾನ-ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ. ಶ್ರೀಮಂತರು ಮತ್ತು ಉಳ್ಳವರು ತಮ್ಮ ಸಂಪತ್ತಿನ ಶೇ 2.5 ಪಾಲನ್ನು ಝಕಾತ್ (ದಾನ) ರೂಪದಲ್ಲಿ ಬಡವರಿಗೆ ನೀಡುವುದನ್ನು ಇಸ್ಲಾಂ ಕಡ್ಡಾಯಗೊಳಿಸಿದೆ.
Greetings on the commencement of Ramzan. pic.twitter.com/Q5YaWzaz38
— Narendra Modi (@narendramodi) April 2, 2022
ಸಹ್ರಿಯಿಂದ ಇಫ್ತಾರ್ ವರೆಗೆ
ಉಪವಾಸವೂ ಸಹ್ರಿಯಿಂದ ಆರಂಭವಾಗಿ ಇಫ್ತಾರ್‌ನೊಂದಿಗೆ ಕೊನೆಗೊಳ್ಳುತ್ತದೆ. ಸೂರ್ಯೋದಯಕ್ಕೆ ಸುಮಾರು ಒಂದು ಗಂಟೆ ಮುನ್ನ ಸೇವಿಸುವ ಆಹಾರಕ್ಕೆ ಸಹ್ರಿ ಎನ್ನುವರು. ಮನೆಗಳಲ್ಲಿ ಇಫ್ತಾರ್‌ಗೆ ಖರ್ಜೂರ, ಹಣ್ಣುಗಳು ಮತ್ತು ಹಣ್ಣಿನ ರಸ ಸೇರಿದಂತೆ ವಿವಿಧ ರೀತಿಯ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ. ಮಸೀದಿಗಳಲ್ಲೂ ಸಾಮೂಹಿಕ ಇಫ್ತಾರ್ ಆಯೋಜನೆ ನಡೆಯುತ್ತದೆ. ಇದರೊಂದಿಗೆ ಈ ಮಾಹೆಯಲ್ಲಿ ಅಲ್ಲಲ್ಲಿ ಸೌಹಾರ್ದ ಇಫ್ತಾರ್ ಕೂಟಗಳೂ ನಡೆಯುತ್ತವೆ. ಆದರೆ ಕೆಲಸ ಮಾಡುವ ಬೆರಳೆಣಿಕೆಯ ಮಂದಿ ಮಾತ್ರ ಉಪವಾಸವನ್ನು ರದ್ದುಗೊಳಿಸಿ, ಸಂಜೆ ವೇಳೆ ಪ್ರಾರಂಭವಾಗುವ ಸಾಮೂಹಿಕ ಪ್ರಾರ್ಥನೆಗಳಲ್ಲಿ ಪಾಲ್ಗೊಳ್ಳುತ್ತಾರೆ.