Connect with us

ಜಯನಗರ ಕ್ಷೇತ್ರದಿಂದ ಸ್ಪರ್ಧಿಸಲು ರಾಮಲಿಂಗಾರೆಡ್ಡಿ ಪುತ್ರಿ ತಯಾರಿ

ಜಯನಗರ ಕ್ಷೇತ್ರದಿಂದ ಸ್ಪರ್ಧಿಸಲು ರಾಮಲಿಂಗಾರೆಡ್ಡಿ ಪುತ್ರಿ ತಯಾರಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರಾಗ್ತಿದ್ದಂತೆ ಹಿರಿಯ ರಾಜಕಾರಣಿಗಳ ಮಕ್ಕಳು ರಾಜಕೀಯ ರಂಗಕ್ಕೆ ಧುಮುಕ್ತಿದ್ದಾರೆ. ಇದೀಗ ಗೃಹಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಕೂಡಾ ಚುನಾವಣಾ ಕಣಕ್ಕೆ ಧುಮುಕುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್‍ಎಫ್‍ಎಸ್ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯವರು ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಅವರು, ತಾವು ಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದೇನೆ ಅಂತಾ ಹೇಳಿದ್ರು.

ಇನ್ನು ತಾವು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದು ಅಲ್ಲಿ ಮಾಡಿರುವ ಸಾಧನೆ ಹಾಗು ತಂದೆ ರಾಮಲಿಂಗಾರೆಡ್ಡಿಯವರ ಹೆಸರು ತಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈಗಾಗಲೇ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿರುವುದಾಗಿ ತಿಳಿಸಿದ್ರು.

Advertisement
Advertisement