ಬೆಂಗಳೂರು: ರಾಮಲಿಂಗಾರೆಡ್ಡಿಯವರು (Ramalinga Reddy) ನಮ್ಮ ಪಕ್ಷದ ಹಿರಿಯ ನಾಯಕರು. ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ, ಅವರು ನನ್ನ ಸಹೋದ್ಯೋಗಿ. ಪಕ್ಷದ ಹಿರಿಯ ನಾಯಕರು. ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ ಎಂದಿದ್ದಾರೆ. ಬೇರೆ ಖಾತೆ ನೀಡಬೇಕಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ಅವರ ಜೊತೆ ಚರ್ಚಿಸುತ್ತೇನೆ. ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್
ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ (DK Shivakumar) ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ (Ramalinga Reddy) ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಕೇರಳಕ್ಕೆ 5 ಲಕ್ಷ ಕೋಟಿ ಸಾಲದ ಶಾಕ್ – ಗ್ಯಾರಂಟಿ ಹೊಸ್ತಿಲಲ್ಲೇ ಭೀಕರ ಆರ್ಥಿಕ ದಿವಾಳಿತನ ಬಿಚ್ಚಿಟ್ಟ ಸಿಎಂ ಸತೀಶನ್!
