ಬೆಂಗಳೂರು: ಕೇವಲ ಸರ್ಕಾರಿ ಮಾತ್ರವಲ್ಲ ಉಡುಪಿ, ದಕ್ಷಿಣ ಕನ್ನಡದಲ್ಲಿ ಖಾಗಿ ಬಸ್‍ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂಬ ಶಾಸಕ ಸುನಿಲ್ ಕುಮಾರ್ (Sunil Kumar) ಹೇಳಿಕೆಗೆ ಇದೀಗ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಟಾಂಗ್ ನೀಡಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್ (Private Bus) ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೋರಿರೋದು ತಪ್ಪಲ್ಲ ಬಿಡಿ. ಅದು ಅವರ ಬೇಡಿಕೆಯಾಗಿದೆ. ಆದರೆ ಮೊದಲು 15 ಲಕ್ಷ ಕೊಡಿ. ಬಸ್ ದರ ಪರಿಷ್ಕರಣೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. (1/2)
— Sunil Kumar Karkala (@karkalasunil) May 30, 2023
ಸುನಿಲ್ ಕುಮಾರ್ ಟ್ವೀಟ್‍ನಲಿ ಹೇಳಿದ್ದೇನು..?: ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‍ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‍ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದರು.