ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ನಮಾಜ್ – ತನಿಖೆಗೆ ರಾಮಲಿಂಗಾ ರೆಡ್ಡಿ ಆದೇಶ

Public TV
1 Min Read
Haveri Driver Namaz Ramalinga Reddy

ಬೆಂಗಳೂರು: ಹಾವೇರಿಯಲ್ಲಿ (Haveri) ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಡ್ರೈವರ್ ಕಂ ಕಂಡಕ್ಟರ್ ನಮಾಜ್ (Driver Namaz) ಮಾಡಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಆದೇಶಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಪತ್ರ ಬರೆದ ರಾಮಲಿಂಗಾ ರೆಡ್ಡಿ, ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Haveri | ಮಾರ್ಗ ಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್

ಪತ್ರದಲ್ಲಿ ಏನಿದೆ?
ಏ.29ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ ಕಂ ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಇದನ್ನೂ ಓದಿ: ಪಾಪಿ ಪಾಕಿಸ್ತಾನ – ಗಡಿಯಲ್ಲಿ ಸುರಂಗ ಕುತಂತ್ರ ತನಿಖೆಗೆ ಬಿಎಸ್‌ಎಫ್‌ಗೆ ನಿರ್ದೇಶನ

ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ‍್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್‌ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್, ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸೂಕ್ತ ಶಿಸ್ತಿನ ಕ್ರಮ ಜರುಗಿಸಲು ಸೂಚಿಸಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆದೇಶಿಸಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆಗಾಗಿ ಕೇಂದ್ರ ಜನಗಣತಿಗೆ ಮುಂದಾಗಿದೆ: ಸಂತೋಷ್ ಲಾಡ್

Share This Article