ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ (Free Bus Travel) ಒಂದೇ ವರ್ಷ ಇರೋದು ಅಂತ ಬಿಜೆಪಿಯವರು ಹೇಳ್ತಾರೆ. ಆದರೆ ಈ ಯೋಜನೆ 5 ವರ್ಷ ಪೂರ್ತಿ ಇರುತ್ತೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು.
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತ್ತೆ ಚುನಾವಣೆ ಆಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಆಮೇಲೂ ಉಚಿತ ಕೊಡ್ತೀವಿ. 10 ವರ್ಷವೂ ಉಚಿತ ಕೊಡ್ತೀವಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕಪ್ಪು ಹಣ ತಂದು ನಮ್ಮ ಅಕೌಂಟ್‌ಗೆ ಹಾಕ್ಲಿಲ್ಲ; ಬಿಜೆಪಿ ವಿರುದ್ಧ ನಾವು ಅಭಿಯಾನ ಮಾಡ್ಬೇಕಾಗುತ್ತೆ – ಡಿಕೆಶಿ
Advertisement
Advertisement
ಬಸ್ ಸ್ಟಾಪ್ ಇರೋ ಕಡೆ ಬಸ್ ಕಡ್ಡಾಯವಾಗಿ ನಿಲ್ಲಿಸಬೇಕು. ನಮ್ಮ ಇಲಾಖೆಗೆ ಒಳ್ಳೆ ಹೆಸರು ತರಬೇಕು. ನನ್ನ ಅವಧಿಯಲ್ಲಿ 203 ಪ್ರಶಸ್ತಿ ಇಲಾಖೆಗೆ ಬಂದಿತ್ತು. ಬಿಜೆಪಿ ಅವಧಿಯಲ್ಲಿ 50 ಪ್ರಶಸ್ತಿ ಮಾತ್ರ ಬಂದಿದೆ. ಕಾರ್ಪೋರೇಷನ್ ನಷ್ಟದಲ್ಲಿ ಇದೆ, ಹೇಗೆ ನಡೆಸುತ್ತಾರೆ ಅಂತ ಹೇಳ್ತಾರೆ. ಪ್ರತಿ ತಿಂಗಳು ಲೆಕ್ಕ ಕೊಡ್ತೀವಿ. ಎಷ್ಟು ಜನ ಓಡಾಡುತ್ತಾರೆ ಅಂತ ಲೆಕ್ಕ ಕೊಡ್ತೀವಿ. ಮಹಿಳೆಯರ ಸಬಲೀಕರಣಕ್ಕೆ ಈ ಯೋಜನೆ ಜಾರಿ ಮಾಡಿದ್ದೇವೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Advertisement
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 20 ದಿನ ಆಗಿದೆ. ನುಡಿದಂತೆ ನಡೆಯುವ ಸರ್ಕಾರ ಇದ್ದರೆ ದೇಶದಲ್ಲಿ ಅದು ಕಾಂಗ್ರೆಸ್ ಸರ್ಕಾರ. ನುಡಿದಂತೆ ನಡೆಯೋದು ನಮಗೆ ಹೊಸದಲ್ಲ. 2013 ರಲ್ಲಿ 165 ಭರವಸೆಗಳಲ್ಲಿ ಪೈಕಿ 158 ಭರವಸೆ ಈಡೇರಿಸಿದ್ದೇವೆ. 2018 ರಲ್ಲಿ ಸೋತೆವು. ಬಿಜೆಪಿ 600 ಆಶ್ವಾಸನೆ ಕೊಟ್ಟಿದ್ರು. ಆದರೆ 60 ಮಾತ್ರ ಈಡೇರಿಕೆ ಮಾಡಿದ್ರು. ಬಿಜೆಪಿಗೂ ನಮಗೂ ಅಜಗಜಾಂತರ ವ್ಯತ್ಯಾಸ ಇದೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಬಿಜೆಪಿ ವಿರುದ್ಧ ಗುಡುಗಿದರು. ಇದನ್ನೂ ಓದಿ: ‘ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
Advertisement
ಇಂದಿನಿಂದ ಶಕ್ತಿ ಯೋಜನೆ ಪ್ರಾರಂಭ ಆಗುತ್ತೆ. ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ಇರುತ್ತದೆ. ರಾಹುಲ್ ಗಾಂಧಿ ಘೋಷಣೆ ಮಾಡಿದ್ರು. ಇಂದು ಜಾರಿ ಮಾಡ್ತಿದ್ದೇವೆ. ಎಲ್ಲಾ ಹೆಣ್ಣುಮಕ್ಕಳು ಉಪಯೋಗ ಮಾಡಿಕೊಳ್ಳಬಹುದು. ರಾಜ್ಯದ ಯಾವುದೇ ಮೂಲೆಗೆ ಹೋಗಬಹುದು. 3 ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್ ಕೊಡ್ತೀವಿ. ಅಲ್ಲಿವರೆಗೂ ಒಂದು ಗುರುತಿನ ಚೀಟಿ ಇಟ್ಟುಕೊಂಡು ಓಡಾಡಿ. ಸ್ಮಾರ್ಟ್ ಕಾರ್ಡ್ ಕೂಡಾ ನಾವೇ ಉಚಿತವಾಗಿ ಕೊಡ್ತೀವಿ. ಅದಕ್ಕೂ ನಾವೇ ಹಣ ಭರಿಸುತ್ತೇವೆ ಎಂದು ತಿಳಿಸಿದರು.