ಬೆಂಗಳೂರು: ರಾಮಲಿಂಗಾರೆಡ್ಡಿ (Ramalinga Reddy) ಅವರ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ರಾಜ್ಯ ಬಿಜೆಪಿ (BJP) ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿದೆ.
ಕಾಂಗ್ರೆಸ್ ಆಂತರಿಕ ಬಿಕ್ಕಟ್ಟನ್ನು ಲೇವಡಿ ಮಾಡಿರುವ ಬಿಜೆಪಿ, “ಪಿಚ್ಚರ್ ಅಭಿ ಬಾಕಿ ಹೈ..! ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ರಾಮಲಿಂಗಾ ರೆಡ್ಡಿ ಅವರು ಇಂಟರ್‌ವೆಲ್ ಸಿಎಂ ಡಿಕೆಶಿವಕುಮಾರ್ ಅವರ ಅವಧಿಯಲ್ಲೂ ಕಿತ್ತಾಟ ಮುಂದುವರಿಯಲಿದೆ ಎಂಬ ದೊಡ್ಡ ಸಂದೇಶ ರವಾನಿಸಿದಂತಿದೆ” ಎಂದು ಟೀಕಿಸಿದೆ.
ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನಿಸಿರುವ ಬಿಜೆಪಿ, “ಸರ್ಕಾರ ಆರಂಭದಲ್ಲೇ ಆಂತರಿಕ ಕಚ್ಚಾಟಗಳಲ್ಲೇ ಮುಳುಗುವ ಮುನ್ಸೂಚನೆ ಈಗಲೇ ಸಿಕ್ಕಿರುವಾಗ, ಇನ್ನು ರಾಜ್ಯದ ಹಳಿತಪ್ಪಿರುವ ಆಡಳಿತ ಸರಿದಾರಿಗೆ ಹೋಗಬಹುದು ಎನ್ನುವುದನ್ನು ಈ ನಾಡಿನ ಜನ ನಿರೀಕ್ಷಿಸಲು ಸಾಧ್ಯವೇ?” ಎಂದು ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿ
“ಈ ಪೆಟ್ಟು ಯಾರ ಒಳ ಏಟು ಎಂದು ತಿಳಿದುಕೊಳ್ಳುವುದರಲ್ಲೇ ಬಂಡೆ ಜೆಲ್ಲಿಪುಡಿಯಾಗುವ ಎಲ್ಲಾ ಮುನ್ಸೂಚನೆ ಸಿಕ್ಕಂತಿದೆ!” ಎಂದು ಮಾರ್ಮಿಕವಾಗಿ ಪೋಸ್ಟ್ ಮಾಡಿದೆ.
ವಿಧಾನಸಭೆಯ ಪ್ರತಿಪಕ್ಷ ನಾಯಕ ಅಶೋಕ್ ಅವರು, ಕನ್ನಡಿಗರು ಬಹುಶಃ ಒಂದು ದಿನ ಸೂರ್ಯನೇ ಹುಟ್ಟದ ನೋಡಬಹುದೇನೋ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಇಲ್ಲದ ದಿನವನ್ನ ನೋಡಲು ಸಾಧ್ಯವೇ ಇಲ್ಲ.ಇನ್ನು ಎರಡು ವರ್ಷ ನಡೆಯಲಿರುವ ಡಿಕೆ ಶಿವಕುಮಾರ್ ಸರ್ಕಾರದ ಈ ನಿತ್ಯ ಕಚ್ಚಾಟಕ್ಕೆ ತೇಪೆ ಹೆಚ್ಚಲು ರಾಹುಲ್ ಗಾಂಧಿ ಅವರು, ಕೆ.ಸಿ. ವೇಣುಗೋಪಾಲ್ ಅವರು, ರಣದೀಪ್ ಸೂರ್ಜೆವಾಲ ಅವರು ಬೆಂಗಳೂರಿನಲ್ಲೇ ಒಂದು ಮನೆ ಮಾಡಿಕೊಂಡು ಇಲ್ಲೇ ಇದ್ದುಬಿಟ್ಟರೆ ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್
ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ…
ಹಿಂದಿನ @siddaramaiah ಸರ್ಕಾರ ಮೂರು ವರ್ಷಗಳ ಕಾಲ ಆಡಳಿತದ ಮೇಲೆ ಹಿಡಿತ ಕಳೆದುಕೊಂಡು ಜನವಿರೋಧಿಯಾಗಿತ್ತು.@DKShivakumar ಸರ್ಕಾರ ಮೂರೇ ದಿನಗಳಲ್ಲಿ ಆಡಳಿತದ ಮೇಲಿನ ಹಿಡಿತ ಕಳೆದುಕೊಂಡು ಜನವಿರೋಧಿಯಾಗುವತ್ತ ಹೆಜ್ಜೆ ಇಟ್ಟಿದೆ.
ಈ ಸರ್ಕಾರದ ಸಚಿವರಿಗೆ ಜನ ಹಿತಕ್ಕಿಂತ ವೈಯಕ್ತಿಕ… pic.twitter.com/1sKNx4kFXP— Sunil Kumar Karkala (@karkalasunil) June 5, 2026
ಹಿಂದಿನ ಸಿದ್ದರಾಮಯ್ಯ ಸರ್ಕಾರ ಮೂರು ವರ್ಷಗಳ ಕಾಲ ಆಡಳಿತದ ಮೇಲೆ ಹಿಡಿತ ಕಳೆದುಕೊಂಡು ಜನವಿರೋಧಿಯಾಗಿತ್ತು. ಡಿಕೆ ಶಿವಕುಮಾರ್ ಸರ್ಕಾರ ಮೂರೇ ದಿನಗಳಲ್ಲಿ ಆಡಳಿತದ ಮೇಲಿನ ಹಿಡಿತ ಕಳೆದುಕೊಂಡು ಜನವಿರೋಧಿಯಾಗುವತ್ತ ಹೆಜ್ಜೆ ಇಟ್ಟಿದೆ. ಈ ಸರ್ಕಾರದ ಸಚಿವರಿಗೆ ಜನ ಹಿತಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಹೆಚ್ಚಾಗಿದೆ. ರಾಜ್ಯದ ಮೇಲಿನ ಕಾಳಜಿಗಿಂತ ವೈಯಕ್ತಿಕ ಕಾಳಜಿಯೇ ಹೆಚ್ಚು ಎಂದು ಸುನಿಲ್ ಕುಮಾರ್ ಟೀಕಿಸಿದ್ದಾರೆ.
