ಬೆಂಗಳೂರು: ಬಿಬಿಎಂಪಿ (BBMP) ಚುನಾವಣೆಯು ಮೇ ತಿಂಗಳಲ್ಲಿ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ಪೀಕರ್‌ಗೆ ಗ್ರೇಟರ್ ಬೆಂಗಳೂರು ವರದಿಯನ್ನು ರಿಜ್ವಾನ್ ಅರ್ಷದ್ ಸಮಿತಿ ಕೊಟ್ಟಿದ್ದಾರೆ. ಬಿಲ್ ಬಗ್ಗೆ ಸದನದಲ್ಲಿ ಚರ್ಚೆ ಆಗಲಿದೆ. ಬಿಜೆಪಿ ಅವರಿಗೆ ಬೆಂಗಳೂರು ಅಭಿವೃದ್ಧಿ ಬೇಕಿಲ್ಲ. ವೋಟ್ ಮಾತ್ರ ಬೇಕು. ಹೀಗಾಗಿ ಗ್ರೇಟರ್ ಬೆಂಗಳೂರು ವಿಧೇಯಕ ವಿರೋಧ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಿಂದ UP ರಸ್ತೆ ಸಾರಿಗೆ ಸಂಸ್ಥೆಗೆ ಬಂಫರ್ – 45 ದಿನಗಳಲ್ಲಿ ವರ್ಷದ ಆದಾಯ
ಮೇ ತಿಂಗಳಲ್ಲಿ 100% ಬಿಬಿಎಂಪಿ ಚುನಾವಣೆ ಆಗಲಿದೆ. ಗ್ರೇಟರ್ ಬೆಂಗಳೂರು ಆದರೆ ವಾರ್ಡ್ ಜಾಸ್ತಿ ಆಗಬಹುದು. 2-3 ಪಾಲಿಕೆ ಆಗಬಹುದು. ಈಗಿನ ಬೆಂಗಳೂರನ್ನ ಒಬ್ಬ ಮೇಯರ್, ಕಮಿಷನರ್ ಆಡಳಿತ ಮಾಡಲು ಸಾಧ್ಯವಿಲ್ಲ. ನನ್ನ ಪ್ರಕಾರ ಬೆಂಗಳೂರು ಅಭಿವೃದ್ಧಿ ಆಗಬೇಕಾದರೆ 2-3 ಪಾಲಿಕೆ ಆಗಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ : ‘ಕಣ್ಣಪ್ಪ’ ಟೀಸರ್‌ನಲ್ಲಿ ಮಲ್ಟಿ ಸ್ಟಾರ್‌ಗಳ ಅಬ್ಬರ- ಪ್ರಭಾಸ್ ಎಂಟ್ರಿಯೇ ಚಿಂದಿ