ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ (Bus Stand) ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ದಿಢೀರ್ ಭೇಟಿ ನೀಡಿ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆ (Shakti Yojana) ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲು ಸರ್ಪ್ರೈಸ್ ವಿಸಿಟ್ ಮಾಡಿದ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣ ಆವರಣದಲ್ಲಿ ಸುತ್ತಾಡಿ ಮಹಿಳಾ ಪ್ರಯಾಣಿಕರನ್ನು ಮಾತನಾಡಿಸಿದರು. ಶಕ್ತಿ ಯೋಜನೆಯಿಂದ ಲಾಭವಾಗಿದೆಯೇ ಎಂದು ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಶಕ್ತಿ ಯೋಜನೆಯಿಂದ ಲಾಭವಾಗಿದೆ ಎಂದು ಮಹಿಳಾ ಪ್ರಯಾಣಿಕರು ಸಂತಸ ಹಂಚಿಕೊಂಡರು. ಇದನ್ನೂ ಓದಿ: ಮತ್ತೆ ಹೊಂದಾಣಿಕೆ ರಾಜಕೀಯ ಬಾಂಬ್- ಬಿಜೆಪಿ ಸಮಾವೇಶಗಳಲ್ಲೇ ಗದ್ದಲ, ಆಕ್ರೋಶ ಸ್ಫೋಟ
- Advertisement
- Advertisement
ಕಂಡೆಕ್ಟರ್ ಹಾಗೂ ಡ್ರೈವರ್‌ಗಳ ಜೊತೆಗೆ ಮಾತನಾಡಿ ಮಾಹಿತಿ ಪಡೆದ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣದಲ್ಲಿರುವ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಅಲ್ಲಿನ ಮಾಹಿತಿ ಪಡೆದುಕೊಂಡರು. ರಾಮಲಿಂಗಾರೆಡ್ಡಿಗೆ ಶಾಸಕ ರಾಜು ಸೇಠ್ ಸೇರಿದಂತೆ ಸಾರಿಗೆ ಅಧಿಕಾರಿಗಳು ಸಾಥ್ ನೀಡಿದರು. ಇದನ್ನೂ ಓದಿ: ಕಲಬುರಗಿಯ ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ