ಬೆಂಗಳೂರು: ರಾಮಲಿಂಗಾರೆಡ್ಡಿ (Ramalinga Reddy) ಮನವೊಲಿಸುವಲ್ಲಿ ಸಫಲರಾಗಿದ್ದೇವೆ. ಸಚಿವ ಸ್ಥಾನಕ್ಕೆ ಕೊಟ್ಟ ರಾಜೀನಾಮೆ ವಾಪಸ್ ಪಡೆದಿದ್ದಾರೆಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Singh Surjewala) ತಿಳಿಸಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಚಿವ ಸಂಪುಟದಲ್ಲಿ ಮುಂದುವರಿದು ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಮಲಿಂಗಾ ರೆಡ್ಡಿ ಬೆಂಗಳೂರು ನಗರದ ಪಿಲ್ಲರ್ ಆಗಿ ಅಜಾತಶತ್ರು ಎನಿಸಿಕೊಂಡಿದ್ದಾರೆ: ಬಿಕೆ ಹರಿಪ್ರಸಾದ್
ಇವತ್ತು ನಿಮ್ಮ ಯಾವುದೇ ಪ್ರಶ್ನೆಗೆ ಉತ್ತರ ಕೊಡಲ್ಲ. ಬಿಜೆಪಿ ಸಾಕಷ್ಟು ಗೊಂದಲ ನಿರ್ಮಾಣ ಮಾಡಿದೆ. ಎನ್‌ಎಸ್‌ಯುಐನಿಂದಲೂ ಬಿ.ಕೆ.ಹರಿಪ್ರಸಾದ್ ಜೊತೆ ರಾಮಲಿಂಗಾರೆಡ್ಡಿ ಇದ್ದರು. ವಿದ್ಯಾರ್ಥಿ ಸಂಘಟನೆಯಿಂದಲೂ ಅವರ ಜೊತೆಗಿದ್ದಾರೆ. ರಾಮಲಿಂಗಾರೆಡ್ಡಿ ಅವರು 8 ಬಾರಿ ಶಾಸಕರಾಗಿದ್ದಾರೆ. ಪಕ್ಷಕ್ಕೆ ಅವರ ಅನುಭವ ಮೌಲ್ಯಯುತವಾದದ್ದು ಎಂದು ತಿಳಿಸಿದರು.
ನಾನು, ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್ ನಾಲ್ಕು ಜನರೂ ಮಾತನಾಡಿದ್ವಿ. ರಾಜೀನಾಮೆ ವಾಪಾಸ್ ಪಡೆಯಲು ಹೇಳಿದ್ದೆವು. ಅವರು ನಮ್ಮ ಜೊತೆ ಕೆಲಸ ನಿರಂತರವಾಗಿ ಮುಂದುವರಿಸಲಿದ್ದಾರೆ ಎಂದರು.
ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ. ನಮ್ಮ ಕ್ಯಾಬಿನೆಟ್‌ನಲ್ಲಿ ಮುಂದುವರಿಯುತ್ತಾರೆ. ಬಿಜೆಪಿ ಇದನ್ನ ಇಟ್ಟುಕೊಂಡು ಸಂಭ್ರಮ ಮಾಡಿದ್ದಾರೆ ಎಂದು ಗೊಂದಲದ ಬಗ್ಗೆ ಸ್ಪಷ್ಟೀಕರಣ ನೀಡಿದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಐದು ಗ್ಯಾರಂಟಿ ಕೊಟ್ಟಿದೆ. ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಟೀಕೆ ಮಾಡ್ತಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಕೊಟ್ಟಿದ್ದು ಕಾಂಗ್ರೆಸ್. 10 ಕೆ.ಜಿ ಅನ್ನಭಾಗ್ಯ, ಯುವನಿಧಿ ಯೋಜನೆ ಕೊಡ್ತಿದ್ದೇವೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ನೀಡಿದ್ದೇವೆ. ಇದು ಕನ್ನಡಿಗರಿಗಾಗಿ ನೀಡಿದ ಗ್ಯಾರಂಟಿ ಎಂದು ಸಮರ್ಥಿಸಿಕೊಂಡರು.
