ಬೆಂಗಳೂರು: ಕೇಂದ್ರ ಹಾಗೂ ರಾಜ್ಯದಲ್ಲಿ ಇರುವುದು ಡಬಲ್ ಇಂಜಿನ್ ಸರ್ಕಾರ ಅಲ್ಲ. ಡಬ್ಬಾ ಇಂಜಿನ್ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಬಿಜೆಪಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Advertisement
ಮೇಕೆದಾಟು ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ತಾವು ಕೆಲಸ ಮಾಡುವುದಿಲ್ಲ, ಮಾಡುವವರನ್ನು ನೋಡಿದರೆ ಹೊಟ್ಟೆಕಿಚ್ಚುಪಟ್ಟುಕೊಳ್ಳುತ್ತಾರೆ. ಸುಳ್ಳು ಪ್ರಚಾರ ಮಾಡುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಈ ಪಾದಯಾತ್ರೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಈ ಯೋಜನೆ ಕಾರ್ಯರೂಪಕ್ಕೆ ತರಬೇಕಾದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದರು. ಇದನ್ನೂ ಓದಿ: ಬಜೆಟ್ ಅಧಿವೇಶನದಿಂದ ನಮ್ಮ ಪಾದಯಾತ್ರೆಯನ್ನ ಎರಡು ದಿನ ಕಡಿತಗೊಳಿಸಿ ಇಂದೇ ಮುಕ್ತಾಯಗೊಳಿಸುತ್ತಿದ್ದೇವೆ: ಸಿದ್ದ
Advertisement
Advertisement
ರಾಜ್ಯದ ಎಲ್ಲ ವರ್ಗದ ಜನರ ಬೆಂಬಲದಿಂದ ಮೇಕೆದಾಟು ಪಾದಯಾತ್ರೆ ಯಶಸ್ವಿಯಾಗಿ ನಡೆದಿದೆ. ಮೇಕೆದಾಟು ಯೋಜನೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಾದಯಾತ್ರೆ ಹೋರಾಟ ಆರಂಭಿಸಿದೆವು. ಈ ಹೋರಾಟ ಆರಂಭವಾದಾಗನಿಂದಲೂ ಇದನ್ನು ಹತ್ತಿಕ್ಕಲು ಸರ್ಕಾರ ಸತತ ಪ್ರಯತ್ನ ಮಾಡಿದೆ. ಕೋವಿಡ್ ಪ್ರಕರಣ ದಾಖಲಿಸಿದರು. ನ್ಯಾಯಾಲಯದ ಮೆಟ್ಟಿಲೇರಿದರು. ನ್ಯಾಯಾಲಯಕ್ಕೆ ಗೌರವ ಕೊಟ್ಟು ನಮ್ಮ ನಾಯಕರು ಇದಕ್ಕೆ ಅಲ್ಪ ವಿರಾಮ ಹಾಕಿ, ಈಗ ಇದನ್ನು ಮತ್ತೆ ಆರಂಭಿಸಿ ಯಶಸ್ವಿಯಾಗಿ ಪಾದಯಾತ್ರೆ ಪೂರ್ಣಗೊಳಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ – 37 ಜನ ಕಾಂಗ್ರೆಸ್ ನಾಯಕರ ವಿರುದ್ಧ FIR
Advertisement
ಕಾಂಗ್ರೆಸ್ ಪಕ್ಷ ಬೆಂಗಳೂರಿಗೆ ಕುಡಿಯುವ ನೀರು ತಂದಿಲ್ಲ ಎಂದು ಬಿಜೆಪಿಗರು ಅಪಪ್ರಚಾರ ಮಾಡುತ್ತಿದ್ದಾರೆ. ಮಹಾರಾಜರ ಕಾಲದಲ್ಲಿ ಬೆಂಗಳೂರಿಗೆ ತಿಪ್ಪಗೊಂಡನಹಳ್ಳಿಯಲ್ಲಿ ನೀರು ತರಯಾಗಿತ್ತು. ನಂತರ ದೇವರಾಜ ಅರಸು, ಗುಂಡೂರಾವ್, ವೀರಪ್ಪ ಮೋಯ್ಲಿ, ಎಸ್.ಎಂ ಕೃಷ್ಣ, ಧರ್ಮಸಿಂಗ್, ಸಿದ್ದರಾಮಯ್ಯ ಹೀಗೆ ಕಾಂಗ್ರೆಸ್ ಪಕ್ಷದ ಸರ್ಕಾರದ ಅವಧಿಯಲ್ಲಿಲ್ಲಿ ಒಂದೊಂದು ಹಂತದಲ್ಲಿ ಒಟ್ಟು ಐದು ಹಂತಗಳಲ್ಲಿ ಬೆಂಗಳೂರಿಗೆ ನೀರು ತರಲಾಗಿದೆ. ಬಿಜೆಪಿ ಪಾತ್ರ ಇದರಲ್ಲಿ ಶೂನ್ಯ. ಬೆಂಗಳೂರು ನಗರಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಕಳೆದ ಬಾರಿ 5 ವರ್ಷ ಅಧಿಕಾರ ಇದ್ದಾಗ ಏನು ಮಾಡಲಿಲ್ಲ, ಈಗ ಮೂರು ವರ್ಷದಿಂದ ಅಧಿಕಾರದಲ್ಲಿದ್ದರೂ ಕೇಂದ್ರದ ಪರಿಸರ ಇಲಾಖೆಯ ಅನುಮತಿ ತರಲು ಆಗಿಲ್ಲ. ಆದರೂ ಬಿಜೆಪಿಯವರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ಯೋಜನೆ ಜಾರಿಯಾದರೆ ಬೆಂಗಳೂರು ಹಾಗೂ ಸುತ್ತಲ ಪ್ರದೇಶದ 2.5 ಕೋಟಿ ಜನರಿಗೆ ಕುಡಿಯುವ ನೀರು ಸಿಗುತ್ತದೆ. ಬೆಂಗಳೂರಿನಲ್ಲಿ ಸಿಎಂಸಿ ಭಾಗದ ಕೆಲವು ಪ್ರದೇಶ ಹೊರತಾಗಿ ಯಾವುದೇ ಪ್ರದೇಶಕ್ಕೆ ಕಾವೇರಿ ನೀರು ಕುಡಿಯಲು ಸಿಗುತ್ತಿಲ್ಲ. ಹೀಗಾಗಿ ಎಲ್ಲರಿಗೂ ಕುಡಿಯುವ ನೀರು ನೀಡಲು ಈ ಯೋಜನೆ ಅಗತ್ಯ ಎಂದು ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಮೆಟ್ರೋ ನಿಲ್ದಾಣವೇ ಟಾರ್ಗೆಟ್ – ಇಲ್ಲಿಯವರೆಗೆ ರಷ್ಯಾ, ಉಕ್ರೇನ್‌ಗೆ ಆದ ನಷ್ಟ ಎಷ್ಟು?