Crime
ಕಾಲೇಜಿನಲ್ಲಿಯೇ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ರಾಮನಗರ: ವಿದ್ಯಾರ್ಥಿಯೊಬ್ಬ ಕಾಲೇಜಿನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ವೆಂಕಟ ಚೈತನ್ಯ ರೆಡ್ಡಿ (22) ಎಂದು ಗುರುತಿಸಲಾಗಿದೆ. ಈತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿರುವ ಸಂಪೂರ್ಣ ಕಾಲೇಜಿನ ಬಾತ್ ರೂಮಿನ ಕಿಟಕಿಯಲ್ಲಿದ್ದ ತಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೆಡ್ಡಿ ಬಿಎಸ್ಸಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೂಲತಃ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಮೈದುಕೂರು ಗ್ರಾಮದ ನಿವಾಸಿ ಶ್ರೀನಿವಾಸರೆಡ್ಡಿ ಪುತ್ರ. ಆತ್ಮಹತ್ಯೆಗೆ ಕಾರಣವೆನೆಂದು ತಿಳಿದುಬಂದಿಲ್ಲ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
