ರಾಮನಗರ: ಅನಧಿಕೃತವಾಗಿ ಚರ್ಚ್ (Church) ನಿರ್ಮಾಣ ಮಾಡಿ ಸಾಮೂಹಿಕ ಪ್ರಾರ್ಥನೆ ಹೆಸರಲ್ಲಿ ಮತಾಂತರ (Conversion) ಮಾಡಲಾಗುತ್ತಿದೆ ಎಂದು ಆರೋಪಿಸಿ ಚನ್ನಪಟ್ಟಣ ತಾಲೂಕಿನ ಕನ್ನಮಂಗಲ ಗ್ರಾಮಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಗ್ರಾಮಕ್ಕೆ ಸೇರಿದ ಸರ್ವೇ ನಂ. 253ರಲ್ಲಿ ಅಕ್ರಮವಾಗಿ ಪ್ರಾರ್ಥನಾ ಮಂದಿರ ನಿರ್ಮಿಸಿ, ಬೇರೆ ಬೇರೆ ಜಿಲ್ಲೆಗಳಿಂದ ವಾರಪೂರ್ತಿ ಜನರನ್ನು ಕರೆತಂದು ಅವರನ್ನು ಮತಾಂತರಗೊಳ್ಳಲು ಮನಃಪರಿವರ್ತನೆ ಮಾಡಲಾಗುತ್ತಿದೆ. ಪ್ರತಿದಿನ 200ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಜನ ಸೇರಿಸಿ ಡಿಜೆ ಮಾದರಿಯ ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು ಮತಾಂತರ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಮಹಾರಾಷ್ಟ್ರದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿದ ಎಡಿಜಿಪಿ ಅಲೋಕ್ ಕುಮಾರ್
Advertisement
Advertisement
ಈ ಕೂಡಲೇ ಅಲ್ಲಿ ನಿರ್ಮಿಸಿರುವ ಅನಧಿಕೃತ ಪ್ರಾರ್ಥನಾ ಮಂದಿರವನ್ನು ತೆರವುಗೊಳಿಸಿ, ಅಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಯ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಗೋಮಾಳ ಜಾಗಗಳಲ್ಲಿ ಶಿಲುಬೆಗಳು ಮತ್ತು ಕ್ರೈಸ್ತ ಮೂರ್ತಿಗಳನ್ನ ನಿರ್ಮಾಣ ಮಾಡಿದ್ದು, ಅದನ್ನು ತೆರವು ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಜೀಪ್‌ನಿಂದ ಬಿದ್ದು ಸಾವು