ರಾಮನಗರ: ಹಿಜಬ್ ವಿವಾದದ ಹಿನ್ನೆಲೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
Advertisement
ಬುಧವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಬ್ ಧರಿಸಿಯೇ ತರಗತಿಗಳಿಗೆ ಹೋಗಲು ವಿದ್ಯಾರ್ಥಿನಿಯರು ಗಲಾಟೆ ಮಾಡಿದ್ದರು. ಹೀಗಾಗಿ ಮುನ್ನೆಚರಿಕಾ ದೃಷ್ಟಿಯಿಂದ ನಗರದ ಪ್ರಥಮ ದರ್ಜೆ ಕಾಲೇಜಿಗೆ ತಾತ್ಕಾಲಿಕವಾಗಿ ರಜೆ ಘೋಷಿಸಲಾಗಿತ್ತು ಮತ್ತು ಮುಂದಿನ ಆದೇಶದವರೆಗೂ ಆನ್‍ಲೈನ್ ಕ್ಲಾಸ್ ನಡೆಸುವಂತೆ ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ಆದೇಶಿಸಿದ್ದರು. ಇದನ್ನೂ ಓದಿ: ತುಪ್ಪ ಸವಿಯುವ ಮುನ್ನ ಇರಲಿ ಎಚ್ಚರ – ನಕಲಿ ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ
Advertisement
Advertisement
ಆನ್‍ಲೈನ್ ಕ್ಲಾಸ್ ಬಗ್ಗೆ ಕಾಲೇಜು ಆಡಳಿತ ಮಂಡಳಿ ಯಾವುದೇ ಮಾಹಿತಿ ನೀಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಈಗಾಗಲೇ ನಮಗೆ ಯಾವುದೇ ಪಠ್ಯಗಳು ಪೂರ್ಣಗೊಂಡಿಲ್ಲ. ಕೋವಿಡ್ ಕಾರಣದಿಂದಾಗಿ ಪಾಠಗಳು ಸರಿಯಾಗಿ ನಡೆದಿರಲಿಲ್ಲ. ಈಗ ಮತ್ತೆ ಆನ್‍ಲೈನ್ ಕ್ಲಾಸ್ ಎನ್ನುತ್ತಿದ್ದಾರೆ. ಹೀಗಾದರೆ ನಮ್ಮ ವಿದ್ಯಾಭ್ಯಾಸ ಹೇಗೆಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಿ – ಉದ್ಯೋಗಿಗಳ ಜೊತೆ ಚಂದ್ರಶೇಖರ್ ಮಾತು