ರಾಮನಗರ: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣ. ಸಿಎಂ ಸ್ವಕ್ಷೇತ್ರದಲ್ಲೇ ಅವರ ಸಹೋದರ ಎಚ್.ಡಿ ರೇವಣ್ಣರ ಲೋಕೋಪಯೋಗಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿದೆ. ಸರ್ಕಾರಿ ನೀತಿ ನಿಯಮಗಳನ್ನೇ ಗಾಳಿಗೆ ತೂರಿ ಮೂರೇ ದಿನಗಳಲ್ಲಿ ಸೀಕ್ರೆಟ್ ಟೆಂಡರ್ ನಡೆಸಲಾಗಿದೆ. ಇತ್ತ ಅನಿತಾ ಮೇಡಂ ಕ್ಷೇತ್ರದಲ್ಲೂ ಸೀಕ್ರೆಟ್ ಟೆಂಡರ್ ನಡೀತಿದೆ.
Advertisement
ಹೌದು. ಸಿಎಂ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸಿಎಂ ಸೋದರ ಎಚ್.ಡಿ ರೇವಣ್ಣನವರ ಲೋಕೋಪಯೋಗಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿಗಳ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್‍ಮಾಲ್ ನಡೆದಿದೆ. ಅದು ಕೂಡ ತಮ್ಮನ ಕ್ಷೇತ್ರದಲ್ಲಿ ಅಣ್ಣನ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಿಎಂ ಅನುಯಾಯಿಗಳಿಗೆ ಸೀಕ್ರೆಟ್ ಟೆಂಡರ್ ಮೂಲಕ ಕಾಮಗಾರಿ ನೀಡಿರುವುದು ಉಳಿದ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
ಸಿಎಂಜಿಆರ್ ವೈ ಯೋಜನೆಯಡಿಯಲ್ಲಿ ಚನ್ನಪಟ್ಟಣ ತಾಲೂಕಿನ ರಸ್ತೆಗಳ ಅಭಿವೃದ್ಧಿಗಾಗಿ 1.90 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಸೀಕ್ರೆಟ್ ಟೆಂಡರ್ ಖಂಡಿಸಿ ರಾಮನಗರದ ಲೋಕೋಪಯೋಗಿ ಇಲಾಖೆ ಮುಂದೆ ಗುತ್ತಿಗೆದಾರರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.
Advertisement
Advertisement
ಯಾವುದೇ ಕಾಮಗಾರಿಗಳು ನಡೆಯಬೇಕಿದ್ರೂ ಇಲಾಖೆಗೆ ಅನುದಾನ ಬಂದ ತಕ್ಷಣ ಜಿಲ್ಲಾಧಿಕಾರಿಗಳಿಂದ ಆಡಳಿತಾತ್ಮಕ ಅನುಮೋದನೆ ಪಡೆದು ಆನಂತರ ನೋಟಿಫಿಕೇಷನ್ ಹೊರಡಿಸಬೇಕು. ಅಲ್ಲದೆ ನಾಮಫಲಕದಲ್ಲಿ ನೋಟಿಸ್ ಹಾಗೂ ಪತ್ರಿಕಾ ಜಾಹಿರಾತುಗಳನ್ನು ನೀಡಬೇಕು. ಆದ್ರೆ ಸರ್ಕಾರದ ಪಾರದರ್ಶಕ ನಿಯಮಗಳನ್ನು ಗಾಳಿಗೆ ತೂರಿ ಸಿಎಂ ಕುಮಾರಸ್ವಾಮಿಯವರ ಅನುಯಾಯಿಗಳಿಗೆ ಮಾತ್ರ ಟೆಂಡರ್ ನೀಡಲಾಗಿದೆ ಎಂದು ಗುತ್ತಿಗೆದಾರ ಪ್ರೇಮ್ ಕುಮಾರ್ ಗರಂ ಆಗಿದ್ದಾರೆ.
ಅನಿತಾ ಕುಮಾರಸ್ವಾಮಿ ಕ್ಷೇತ್ರದಲ್ಲೂ ಟೆಂಡರ್ ಗೋಲ್‍ಮಾಲ್:
ಕೇವಲ ಚನ್ನಪಟ್ಟಣ ಮಾತ್ರವಲ್ಲದೆ ರಾಮನಗರ ಕ್ಷೇತ್ರದಲ್ಲೂ ಕೂಡ ಇದೇ ಪರಿಸ್ಥಿತಿಯಿದ್ದು ಸುಮಾರು 1 ಕೋಟಿಯಷ್ಟು ಕಾಮಗಾರಿ ಶಾಸಕಿ ಅನಿತಾ ಕುಮಾರಸ್ವಾಮಿ ಬೆಂಬಲಿಗರ ಪಾಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದೆ. ಒಟ್ಟಾರೆ ಸಿಎಂ ಕ್ಷೇತ್ರದಲ್ಲೇ ಅವರ ಸೋದರ ಎಚ್.ಡಿ ರೇವಣ್ಣನವರ ಲೋಕೋಪಯೋಗಿ ಇಲಾಖೆಯಲ್ಲಿ ಅಭಿವೃದ್ಧಿ ಕಾಮಗಾರಿಯ ಟೆಂಡರ್‍ನಲ್ಲಿ ಅಧಿಕಾರಿಗಳು ಅವ್ಯವಹಾರ ನಡೆಸುತ್ತಿದ್ದು ಗುತ್ತಿಗೆದಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv