ರಾಮನಗರ: ಅನಾರೋಗ್ಯ ಹಿನ್ನೆಲೆಯಲ್ಲಿ ಸ್ವಾತಂತ್ರ ಹೋರಾಟಗಾರ ಹಾಗೂ ಮಾಜಿ ಶಾಸಕ ಕಾಡಹಳ್ಳಿ ಶಿವಲಿಂಗೇಗೌಡರು ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Advertisement
ಮೂಲತಃ ಕನಕಪುರ ತಾಲೂಕಿನ ಕಾಡಹಳ್ಳಿ ಗ್ರಾಮದವರು ಶಿವಲಿಂಗೇಗೌಡರು, ಬೆಂಗಳೂರಿನ ಜಯನಗರದಲ್ಲಿ ನೆಲೆಸಿದ್ದರು ಮತ್ತು ಇವರು ಸ್ವಾತಂತ್ರ್ಯ ಹೋರಾಟದಲ್ಲಿ ಸೆರೆವಾಸವನ್ನು ಅನುಭವಿಸಿದ್ದರು.
Advertisement
ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ 1962-67 ರ ಅವಧಿಯಲ್ಲಿ ವಿರುಪಾಕ್ಷಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಶಿವಲಿಂಗೇಗೌಡರು ನಂತರ ಕಾಂಗ್ರೆಸ್ ಪಕ್ಷ ತೊರೆದು ಜನತಾ ಪಾರ್ಟಿ ಸೇರಿದ್ದರು. 1978-83 ಮತ್ತು 1985-89 ರ ಅವಧಿಯಲ್ಲಿ ಸಾತನೂರು ಕ್ಷೇತ್ರದಲ್ಲಿ ಜನತಾ ಪಾರ್ಟಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಇಂದು ಸ್ವಗ್ರಾಮ ಕಾಡಹಳ್ಳಿಯಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ನಡೆಯಲಿದೆ.