– ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಡಿಕೆಶಿ ಒತ್ತಾಸೆಯಂತೆ ಹೆಸರು ಬದಲಾವಣೆ
ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ (Bengaluru South) ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ಮಾತನಾಡಿದ ಡಿಕೆಶಿ, ರಾಮನಗರ ಹೆಡ್ ಕ್ವಾಟ್ರಸ್ ಅದೇ ಇರುತ್ತದೆ. ಯಾವುದೆ ಬದಲಾವಣೆ ಇಲ್ಲ. ಮೂಲ ಅದು ಬೆಂಗಳೂರು ಜಿಲ್ಲೆಯಾಗಿತ್ತು. ಇಂದಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರೇ ಪರಮೇಶ್ವರ್ ಮೇಲೆ ಕ್ರಮ ಆಗ್ಬೇಕು ಅಂತಾ ಇಡಿಗೆ ಮಾಹಿತಿ ನೀಡಿದ್ದು: ಪ್ರಹ್ಲಾದ್ ಜೋಶಿ
ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು, ಈಗ ಮರೆವು ಜಾಸ್ತಿಯಾಗಿದೆ: ಸೋಮಣ್ಣ