ರಾಮನಗರ: ಬೆಟ್ಟದ ಮೇಲಿಂದ ಜಿಗಿದು ಹೆಲ್ತ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ.
ಬೆಂಗಳೂರಿನ ಯಲಹಂಕದಲ್ಲಿ ಆರೋಗ್ಯ ನಿರೀಕ್ಷಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್, ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರುಕ್ಮಿಣಿ ನಗರದ ನಿವಾಸಿಯಾಗಿದ್ದ ಪ್ರಶಾಂತ್, ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ಹೊರ ಬಂದಿದ್ದರು. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪೋಷಕರು ಕಾಣೆಯಾಗಿರುವುದಾಗಿ ದೂರು ನೀಡಿದ್ದರು.
Advertisement
Advertisement
ದೂರು ಪಡೆದಿದ್ದ ಪೀಣ್ಯ ಪೊಲೀಸರು ಮೊಬೈಲ್ ಟ್ರ್ಯಾಕ್ ಮಾಡಿದ್ದು ಎಸ್.ಆರ್.ಎಸ್ ಬೆಟ್ಟದಲ್ಲಿ ಕಡೆಯ ಲೊಕೇಶನ್ ತೋರಿಸಿತ್ತು. ಅಲ್ಲದೆ ಬೆಟ್ಟದ ಬಳಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ನಂತರ ಬೆಟ್ಟದ ಸುತ್ತ-ಮುತ್ತ ಹುಡುಕಿದಾಗ ಪ್ರಶಾಂತ್ ಹೆಣವಾಗಿ ಪತ್ತೆಯಾಗಿದ್ದಾರೆ.
Advertisement
ಆರೋಗ್ಯ ನಿರೀಕ್ಷಕ ಪ್ರಶಾಂತ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.