ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.
ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು, ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ವೈನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್, ಎಂಎಸ್‍ಐಎಲ್ ಮಳಿಗೆಗಳಿಗೆ ಬೀಗ ಜಡಿಯಲಾಗಿದೆ.
Advertisement
Advertisement
ಕಳೆದು ಮೂರು ದಿನಗಳಿಂದ ಮದ್ಯಕ್ಕಾಗಿ ಹುಡುಕಾಡ ನಡೆಸಿದ್ದ ರಮೇಶ್ ಇಂದು ಸಹ ಬೆಳಗ್ಗೆ 6 ಗಂಟೆಯಿಂದಲೇ ಹುಲಿಕಲ್ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಡುಕಾಡಿದ್ದರೂ ಎಣ್ಣೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
Advertisement
ರಮೇಶ್‍ಗೆ ವಿವಾಹವಾಗಿದ್ದು ಪತ್ನಿ ಮತ್ತು ಮಕ್ಕಳು ಆತನನ್ನು ತೊರೆದಿದ್ದರು. ಇದರಿಂದಾಗಿ ಮದ್ಯಕ್ಕೆ ದಾಸನಾಗಿದ್ದ. ದಿನವೂ ಕೂಲಿ ಮಾಡಿದ ಹಣವನ್ನ ಮದ್ಯ ಖರೀಸಿದ ಕುಡಿಯುತ್ತಿದ್ದ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಕುದೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.