ರಾಮನಗರ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ 10 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಿ ರಾಮನಗರ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಶಿಕ್ಷೆ ವಿಧಿಸಿದೆ.
ತಮಿಳುನಾಡು ಮೂಲದ ಮಂಜುನಾಥ್ ಜೈಲು ಶಿಕ್ಷೆಗೆ ಒಳಗಾದ ಕಾಮುಕ. 2018 ರಲ್ಲಿ ಕನಕಪುರ ನಗರದ ಪ್ರಶಾಂತನಗರದಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ಮಂಜುನಾಥ್ ತನ್ನ ಪತ್ನಿಯ ಸಹಾಯದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಪರಾಧಿ ಮಂಜುನಾಥ್ನ ಕೃತ್ಯ ಎರಡು ದಿನಗಳ ಬಳಿಕ ಬಾಲಕಿಯ ತಂದೆ-ತಾಯಿಗೆ ತಿಳಿದು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Advertisement
Advertisement
ಬಾಲಕಿಯ ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಠಾಣೆಯ ವೃತ್ತ ನಿರೀಕ್ಷಕ ಮಲ್ಲೇಶ್ ಅವರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಬಗ್ಗೆ ಸರ್ಕಾರಿ ಅಭಿಯೋಜಕಿ ಶಿಲ್ಪಾ ಅವರು ವಾದ ಮಂಡಿಸಿದ್ದು, ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿ ಮಂಜುನಾಥ್ಗೆ 10 ವರ್ಷ ಜೈಲು 20 ಸಾವಿರ ದಂಡ ಶಿಕ್ಷೆ ನೀಡಿ ಆದೇಶಿಸಿದ್ದಾರೆ.
Advertisement
ಅಲ್ಲದೇ ಬಾಲಕಿ ಮೇಲಿನ ಹಲ್ಲೆಗೆ ಒಂದು ತಿಂಗಳ ಹೆಚ್ಚುವರಿ ಜೈಲುವಾಸ ಹಾಗೂ ದಂಡ ಕಟ್ಟಲು ವಿಫಲವಾದರೆ 6 ತಿಂಗಳ ಕಾಲ ಹೆಚ್ಚುವರಿ ಜೈಲುವಾಸ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.