ರಾಮನಗರ: 77ನೇ ಸ್ವಾತಂತ್ರ್ಯೋತ್ಸವ (77th Independence Day) ಸಂಭ್ರಮದ ಭಾಗವಾಗಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಅವರು 2.70 ಲಕ್ಷ ಲಡ್ಡು ವಿತರಣೆ ಮಾಡಲಿದ್ದಾರೆ.
ಆ.15 (ಮಂಗಳವಾರ) ಸ್ವತಂತ್ರ ದಿನಾಚರಣೆ ಆಚರಿಸಲು ದೇಶ ಸಜ್ಜಾಗಿದೆ. ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮಿಸುವ ಉದ್ದೇಶದಿಂದ ಲಾಡು ವಿತರಣೆಗೆ ಇಕ್ಬಾಲ್ ಹುಸೇನ್ ಅವರು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ 5 ತಾಲ್ಲೂಕಿನ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಲಡ್ಡು ಹಂಚಿಕೆ ಮಾಡಲಿದ್ದಾರೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್ ಸಿಸ್ಟಮ್, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ
ರಾಮನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬರೋಬ್ಬರಿ 2,70,000 ಲಡ್ಡು ತಯಾರಿ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಲಾಡು ಹಂಚಿಕೆ ಮಾಡಲಾಗುವುದು.
100 ಮಂದಿ ನುರಿತ ಬಾಣಸಿಗರು ಲಡ್ಡು ತಯಾರಿಸಿದ್ದಾರೆ. ಸ್ವತಂತ್ರ ದಿನದಂದು ಹಂಚಲು ಇಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲಾ ಶಾಲೆಗಳಿಗೂ ಲಡ್ಡು ನೀಡಲಾಗುವುದು. ಶಾಸಕ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಲಡ್ಡು ಹಂಚಿಕೆ ಕಾರ್ಯ ನಡೆಯಲಿದೆ. ಇದನ್ನೂ ಓದಿ: ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ರಾತ್ರಿ ವೇಳೆ ವಾಹನ ನಿಲ್ಲಿಸಿದ್ರೆ ಬರ್ತಾರೆ ದರೋಡೆಕೋರರು
Web Stories