ನವದೆಹಲಿ: ರಾಮನಗರ (Ramanagara) ಜಿಲ್ಲೆ ಹೆಸರು ಬದಲಾವಣೆ ವಿಚಾರವಾಗಿ ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಹಿಂದುತ್ವವನ್ನು ಲಿಂಕ್ ಮಾಡಿ ಕಾಂಗ್ರೆಸ್ (Congress) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಗವಾನ್ ರಾಮನ ಹೆಸರನ್ನ ಕೈ ಬಿಟ್ಟು ಬೆಂಗಳೂರು ದಕ್ಷಿಣ (Bengaluru South) ಎಂದು ಹೆಸರು ಬದಲಾಯಿಸಿದ್ದಾರೆ. ಹಿಂದೂಗಳ (Hindu) ಅಸ್ತಿತ್ವಕ್ಕೆ ಅಪಾಯ ಇದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ – ತಮ್ಮ ಭೂಮಿಗಳ ಬೆಲೆ ಹೆಚ್ಚಿಸುವ ಷಡ್ಯಂತ್ರದ ಭಾಗ: ಹೆಚ್‌ಡಿಕೆ ಕೆಂಡ
Just when no one was watching—or so the Congress government in Karnataka thought—they surreptitiously dropped Bhagwan Ram’s name from Ramanagara district and renamed it Bengaluru South District.
Congress’s visceral hatred for Hindus and their beliefs poses a threat to our… https://t.co/pqcVcySnem pic.twitter.com/TRlf63VGoP
— Amit Malviya (@amitmalviya) May 23, 2025
ಹಿಂದೂಗಳು ಮತ್ತು ಅವರ ನಂಬಿಕೆಗಳ ಬಗ್ಗೆ ಕಾಂಗ್ರೆಸ್‌ನ ತೀವ್ರ ದ್ವೇಷವು ನಮ್ಮ ನಾಗರಿಕತೆಯ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ. ಹಿಂದೂಗಳು ತಮ್ಮ ಏಕೈಕ ತಾಯ್ನಾಡಿನಲ್ಲಿ ಉಳಿಯಬೇಕಾದರೆ ಕಾಂಗ್ರೆಸ್ ಸಾಯಬೇಕು. ಈ ಆಯ್ಕೆ ಬಿಟ್ಟರೆ ಬೇರೆ ದಾರಿಯಿಲ್ಲ ಎಂದು ಬರೆದಿದ್ದಾರೆ. ಇದನ್ನೂ ಓದಿ: ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಆಗಮಿಸುವ ಹೊತ್ತಲ್ಲೇ ಮಾಸ್ಕೋದಲ್ಲಿ ಡ್ರೋನ್ ದಾಳಿ!
ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರಕ್ಕೆ ಬಿಜೆಪಿ, ಜೆಡಿಎಸ್ ವಿರೋಧ ವ್ಯಕ್ತಪಡಿಸಿವೆ. ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಪಕ್ಷಗಳು ಕಿಡಿಕಾರಿವೆ.