– ಶಿಕ್ಷಕನಿಗೆ ಗ್ರಾಮಸ್ಥರಿಂದ ಥಳಿತ
ರಾಮನಗರ: ಸರ್ಕಾರಿ ಶಾಲಾ ಶಿಕ್ಷಕನೊಬ್ಬ ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರ ತಾಲೂಕಿನಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಾಮಿಕ ಶಾಲೆಯ ಚಂದ್ರುಶೇಖರ್ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಶಿಕ್ಷಕ. ಶಾಲೆಯ ನಾಲ್ಕನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ದಿನನಿತ್ಯವೂ ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದ್ದ. ಅಷ್ಟೇ ಅಲ್ಲದೆ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಕೆನ್ನೆ ಕಚ್ಚಿ, ಮೈ ಮೇಲೆ ಗಾಯಗಳನ್ನು ಮಾಡಿದ್ದಾನೆ.
ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಸ್ನಾನಕ್ಕೆ ಹೋಗುವಾಗ ಪೋಷಕರು ಗಾಯಗಳನ್ನು ಗಮನಿಸಿ ವಿಚಾರಸಿದ್ದಾರೆ. ಆಗ ವಿದ್ಯಾರ್ಥಿನಿ ಘಟನೆಯನ್ನು ವಿವರಿಸಿದ್ದಾರೆ. ಇದರಿಂದಾಗಿ ಆಕ್ರೋಶಗೊಂಡ ಬಾಲಕಿಯ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ನುಗ್ಗಿ ಕಾಮುಕ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಘಟನೆಯ ಕುರಿತು ಮಾಹಿತಿ ಸ್ಥಳೀಯರು ದೂರು ನೀಡುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ತಾಲೂಕು ಶಿಕ್ಷಣಾಧಿಕಾರಿ ಚಂದ್ರಶೇಖರ್ ನನ್ನು ಅಮಾನತುಗೊಳಿಸಿದ್ದಾರೆ.
ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು, ಅಕ್ಷರ ಜ್ಞಾನ ನೀಡಬೇಕು. ಕೂಲಿ ಮಾಡಿ ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸುತ್ತಾರೆ. ಆದರೆ ಚಂದ್ರಶೇಖರ್ ಪುಟ್ಟ ಮಗುವಿನ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಗ್ರಾಮದ ಮಹಿಳೆ ಒತ್ತಾಯಿಸಿದ್ದಾರೆ.
ಈ ಘಟನೆಯ ಕುರಿತು ಮಾಹಿತಿ ಸಿಗುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ರಾಮನಗರ ಗ್ರಾಮಾಂತರ ಪೊಲೀಸರು ಶಿಕ್ಷಕ ಚಂದ್ರಶೇಖರ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv