Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾದಲ್ಲಿ ಕರಾಟೆ ಸ್ಪರ್ಧೆ – ಬಂಗಾರದ ಪದಕ ಗೆದ್ದ ಚನ್ನಪಟ್ಟಣದ ವಿದ್ಯಾರ್ಥಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀಲಂಕಾದಲ್ಲಿ ಕರಾಟೆ ಸ್ಪರ್ಧೆ – ಬಂಗಾರದ ಪದಕ ಗೆದ್ದ ಚನ್ನಪಟ್ಟಣದ ವಿದ್ಯಾರ್ಥಿಗಳು

Districts

ಶ್ರೀಲಂಕಾದಲ್ಲಿ ಕರಾಟೆ ಸ್ಪರ್ಧೆ – ಬಂಗಾರದ ಪದಕ ಗೆದ್ದ ಚನ್ನಪಟ್ಟಣದ ವಿದ್ಯಾರ್ಥಿಗಳು

Public TV
Last updated: December 31, 2019 7:53 pm
Public TV
Share
2 Min Read
rmg2 1
SHARE

ರಾಮನಗರ: ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೊಂಬೆನಗರಿ ಚನ್ನಪಟ್ಟಣ ತಾಲೂಕಿನ ಇಬ್ಬರು ವಿದ್ಯಾರ್ಥಿಗಳು ಬಂಗಾರದ ಪದಕಕ್ಕೆ ಕೊರಳೊಡ್ಡುವ ಮೂಲಕ ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕೊಂಡಾಪುರ ಗ್ರಾಮದ ಪೂರ್ಣಿಮಾ ಹಾಗೂ ಪಟ್ಟಣದ ಕೇಂಬ್ರಿಡ್ಜ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಣ್ಣಘಟ್ಟ ಗ್ರಾಮದ ನಿಖಿಲ್ ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ. ಕಳೆದ 28 ರಂದು ಶ್ರೀಲಂಕಾದಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕರಾಟೆ ಶಿಕ್ಷಕ ಆನಂದ್ ಮಾರ್ಗದರ್ಶನದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಹ ಕರಾಟೆಯ ತರಬೇತಿ ಪಡೆದು ಶ್ರೀಲಂಕಾಗೆ ಪಯಣಿಸಿ ಸ್ಪರ್ಧೆಯಲ್ಲಿ ಬಂಗಾರದ ಪದಕ ಗೆದ್ದು ತಂದಿದ್ದಾರೆ.

collage rmg

ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ. ಅಲ್ಲದೇ ಬಡಕುಟುಂಬದ ಹೆಣ್ಣು ಮಗಳೊಬ್ಬಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕರಾಟೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದಿರುವುದು ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡುವಂತಾಗಿದೆ.

ಬಡತನ ಮೆಟ್ಟಿ ನಿಂತ ಕರಾಟೆ ಪಟು
ಆರ್ಥಿಕ ಸಂಕಷ್ಟದಲ್ಲಿದ್ದ ಕರಾಟೆಪಟು ಪೂರ್ಣಿಮಾಗೆ ಶ್ರೀಲಂಕಾದಲ್ಲಿ ನಡೆಯಲಿದ್ದ ಚಾಂಪಿಯನ್ ಶಿಪ್‍ನಲ್ಲಿ ಪಾಲ್ಗೊಳ್ಳಲು ಹಣದ ಸಮಸ್ಯೆ ಎದುರಾಗಿತ್ತು. ಪ್ರಯಾಣದ ಖರ್ಚನ್ನು ಬರಿಸುವುದಿಲ್ಲ ಎಂದು ರಾಜ್ಯದ ಕರಾಟೆ ಸಂಸ್ಥೆ ತಿಳಿಸಿದ್ದರಿಂದ ಪೂರ್ಣಿಮಾ ಸಾಕಷ್ಟು ಆತಂಕ್ಕೆ ಒಳಗಾಗಿದ್ದರು. ಅಲ್ಲದೇ ಈಗಾಗಲೇ ಸಾಕಷ್ಟು ಸಾಲ ಮಾಡಿ ಮಗಳನ್ನು ವಿದ್ಯಾಭ್ಯಾಸಕ್ಕೆ ಸೇರಿಸಿದ್ದ ತಂದೆ-ತಾಯಿ ಸಹ ಹಣವಿಲ್ಲದೇ ಮಗಳನ್ನು ಶ್ರೀಲಂಕಾಗೆ ಕಳುಹಿಸಲು ಹಿಂದೇಟು ಹಾಕಿದ್ದರು.

rmg 9

ಇದೇ ವೇಳೆ ಜಿಲ್ಲೆಯ ಹಲವು ದಾನಿಗಳು ಪೂರ್ಣಿಮಾಳ ನೆರವಿಗೆ ನಿಂತು ಧನ ಸಹಾಯ ಮಾಡಿದ್ರು. ರಾಮನಗರ ಜಿಲ್ಲಾ ವಾರ್ತಾಧಿಕಾರಿ ಎಸ್ ಶಂಕರಪ್ಪ ತಮ್ಮ ಕಚೇರಿಗೆ ಪೂರ್ಣಿಮಾಳ ಕುಟುಂಬದವರನ್ನು ಕರೆಸಿಕೊಂಡು ತಮ್ಮ ವೇತನದ ಹಣದಲ್ಲಿ ಪ್ರಯಾಣಕ್ಕೆ ನೆರವಾಗಿದ್ರು. ಇದೇ ವೇಳೆ ವಾರ್ತಾಧಿಕಾರಿಗಳನ್ನು ಭೇಟಿಯಾಗಲು ಬಂದಿದ್ದ ಕ್ರೀಡಾಸಕ್ತರೋರ್ವರು ಕೂಡ ವೈಯಕ್ತಿಕವಾಗಿ 10 ಸಾವಿರ ರೂಪಾಯಿಗಳನ್ನು ನೀಡಿ ಪೂರ್ಣಿಮಾಳು ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲು ನೆರವಾಗಿದ್ರು.

ಬಂಗಾರದ ಪದಕ ಗೆದ್ದ ಖುಷಿಯಲ್ಲಿರುವ ಪೂರ್ಣಿಮಾ ತನ್ನ ಆಸೆಗೆ ನೀರೆರೆಯುವ ಮೂಲಕ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲು ನೆರವಾದ ಪ್ರತಿಯೊಬ್ಬರಿಗೂ ಸಹ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೇ ಮುಂದೆ ದೇಶಕ್ಕಾಗಿ ಕ್ರೀಡೆಯಲ್ಲಿ ಭಾಗವಹಿಸಿ ಪದಕ ಗೆದ್ದು ತ್ರಿವರ್ಣ ಧ್ವಜವನ್ನ ಹಿಡಿಯಬೇಕು ಎಂಬ ಮಹದಾಸೆಯನ್ನು ಹೊಂದಿದ್ದಾಳೆ.

TAGGED:gold medalInternational CompetitionkaratePublic TVramanagaraSri Lankastudentsಅಂತರಾಷ್ಟ್ರೀಯ ಸ್ಪರ್ಧೆಕರಾಟೆಚಿನ್ನದ ಪದಕಪಬ್ಲಿಕ್ ಟಿವಿರಾಮನಗರವಿದ್ಯಾರ್ಥಿಗಳುಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Naseer Ahmed
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌

Public TV
By Public TV
1 minute ago
g.parameshwara 2
Bengaluru City

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ – ಪರಮೇಶ್ವರ್

Public TV
By Public TV
25 minutes ago
Noida Protest 2
Latest

ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಸುತ್ತಿದ್ದ ನೌಕರರ ಪ್ರತಿಭಟನೆ ವೇಳೆ ಹಿಂಸಾಚಾರ – ಪೊಲೀಸರ ವಾಹನಗಳಿಗೆ ಬೆಂಕಿ

Public TV
By Public TV
26 minutes ago
jigani techie marries twice and engaged to another woman case filed after first wife exposes scams
Bengaluru Rural

ಇಬ್ಬರ ಜೊತೆ ಮದುವೆ, ಒಬ್ಬಳ ಜೊತೆ ಎಂಗೇಜ್ಮೆಂಟ್ – ಸಿಕ್ಕಿಬಿದ್ದ ಚಪಲಚನ್ನಿಗರಾಯನಿಗೆ ಪೆಟ್ಟೋ ಪೆಟ್ಟು!

Public TV
By Public TV
34 minutes ago
Hardik Pandya 1
Cricket

ಯಾವುದೂ ವರ್ಕೌಟ್ ಆಗ್ತಿಲ್ಲ – ಹ್ಯಾಟ್ರಿಕ್ ಸೋಲಿನ ಬಳಿಕ ಹೊಸ ಪ್ಲ್ಯಾನ್‌ ಬಗ್ಗೆ ಹಾರ್ದಿಕ್ ಮಾತು

Public TV
By Public TV
53 minutes ago
H D Kumaraswamy 1
Bengaluru City

ವಿಧಾನಸೌಧಕ್ಕೆ ಮತ್ತೆ ಬರೋದು ‌ಭಗವಂತನ ಇಚ್ಛೆ, ಜನರ ಆಶೀರ್ವಾದ: ಹೆಚ್‌ಡಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?