ಚಿಕ್ಕಮಗಳೂರು: ಚಿಕ್ಕಮಗಳೂರು ನಗರಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಿಜೆಪಿ ಅಧಿಕಾರ ನಡೆಸುತ್ತಿದೆ. ಆದರೆ, ಅವರ ದುರಾಡಳಿತದಿಂದ ಸುಂದರ ನಗರದ ವ್ಯವಸ್ಥೆ ದುಸ್ಥಿತಿಗೆ ತಲುಪಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.
ನಗರದ ವಿವಿಧ ವಾರ್ಡ್ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ನಗರದ ಅಭಿವೃದ್ಧಿ ಶೂನ್ಯವಾಗಿದೆ. ಕುಡಿಯುವ ನೀರು, ವಿದ್ಯುತ್, ಒಳಚರಂಡಿ ವ್ಯವಸ್ಥೆ ಕೆಟ್ಟ ಸ್ಥಿತಿಗೆ ತಲುಪಿದೆ. ಬಿಜೆಪಿಯ ದುರಾಡಳಿತದಿಂದ ನಗರ ಸೇರಿದಂತೆ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ನಿಗದಿತ ಸಮಯದಲ್ಲಿ ನಗರಸಭೆಗೆ ಚುನಾವಣೆ ನಡೆಯುತ್ತಿಲ್ಲ. ನ್ಯಾಯಾಲಯದ ನಿರ್ದೇಶನದ ಮೇಲೆ ಚುನಾವಣೆ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರಿಗೆ ಒಂದೇ ಒಂದು ಮನೆಯನ್ನೂ ನೀಡಿಲ್ಲ. ಚುನಾಯಿತ ಜನಪ್ರತಿನಿಧಿಗಳ ನಿರ್ಲಕ್ಷö್ಯದಿಂದ ನಗರದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕ್ರಿಸ್‌ಮಸ್ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್ ಕಲಾಕೃತಿ
Advertisement
Advertisement
ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದಿಂದ ಅಡುಗೆ ಅನಿಲ, ಇಂಧನ ಬೆಲೆ ಹೆಚ್ಚಳವಾಗುತ್ತಿದ್ದು, ದಿನನಿತ್ಯದ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ. ಬೆಲೆ ಏರಿಕೆಯಿಂದ ಬೇಸತ್ತಿರುವ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಲವು ತೋರುತ್ತಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ವಚ್ಛ, ಪ್ರಾಮಾಣಿಕ, ಅಭಿವೃದ್ಧಿ ಪೂಕರ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸತತ 53 ದಿನಗಳವರೆಗೆ ಸಂಪೂರ್ಣ ಭರ್ತಿ – 90 ವರ್ಷಗಳ ಇತಿಹಾಸದಲ್ಲೇ ದಾಖಲೆ
ಜಿಲ್ಲೆ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಇಲ್ಲಿ ವಾಣಿಜ್ಯ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಗರದ ಅಭಿವೃದ್ಧಿ ಬಹುಮುಖ್ಯ ಪಾತ್ರವಹಿಸಲಿದ್ದು, ಕಾಂಗ್ರೆಸ್ ಪಕ್ಷ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದು ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ಹೇಳಿದರು.