ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರಿಗೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಅವರು ವಾಗ್ದಾಳಿ ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಭಾಕರ್ ಭಟ್ ಅವರು ಜನರಲ್ಲಿ ಭಿಕ್ಷೆ ಕೇಳುತ್ತಿದ್ದಾರೆ. ಮಕ್ಕಳ ಕೈಯಲ್ಲಿ ತಟ್ಟೆ ಹಿಡಿದು ರಸ್ತೆಯಲ್ಲಿ ನಿಲ್ಲಿಸಿದ್ದಕ್ಕೆ ಇನ್ನು ಮುಂದೆ ಇವರೇ ತಟ್ಟೆ ಹಿಡಿದು ನಿಲ್ಲುವ ಪರಿಸ್ಥಿತಿ ಬರಲಿದೆ. ಭಿಕ್ಷೆ ಬೇಡುವಂಥ ಸ್ಥಿತಿ ಇವರಿಗೆ ಬರಲಿದೆ ಅಂತಾ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
Advertisement
ನಾವು ಬಡವರ ಹೊಟ್ಟೆಗೆ ಮೇಲೆ ಹೊಡೆಯುವುದಿಲ್ಲ. ಮಕ್ಕಳು ತಟ್ಟೆ ಹಿಡಿಯ ಬೇಕಾಗಿಲ್ಲ ಇವರು ತಟ್ಟೆ ಹಿಡಿಯಬೇಕು. ಪ್ರಜ್ಞಾವಂತ ನಾಗರೀಕರು ಇವುಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.
Advertisement
ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಶ್ರೀದೇವಿ ವಿದ್ಯಾಕೇಂದ್ರಕ್ಕೆ ಸರ್ಕಾರ ಅನುದಾನ ಕಡಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಎರಡೂ ವಿದ್ಯಾಕೇಂದ್ರಗಳ ವಿದ್ಯಾರ್ಥಿಗಳು ಆಗಸ್ಟ್ ನಲ್ಲಿ ಬಿಸಿ ರೋಡ್‍ನಲ್ಲಿ ತಟ್ಟೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದ್ದರು.