ಬೆಂಗಳೂರು: ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು (ಭಾನುವಾರ) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
Advertisement
ಮಾಂಸ ಮಾರಾಟ ನಿಷೇಧ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದ್ದು, ಹಿಂದೂ ಧಾರ್ಮಿಕ ಹಬ್ಬ ರಾಮನವಮಿ ಏಪ್ರಿಲ್ 10ರಂದು ಬಂದಿದೆ. ಭಾನುವಾರ ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆ ಈ ಆದೇಶವನ್ನು ಬಿಬಿಎಂಪಿ ಜಾರಿಗೆ ತಂದಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ, ಯಾವುದೇ ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ: ಸಿದ್ದರಾಮಯ್ಯ
Advertisement
ಶ್ರೀರಾಮನವಮಿಯಂದು ಪ್ರಾಣಿ, ವಧೆ ಮತ್ತು ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಕಸಾಯಿಖಾನೆಯಲ್ಲೂ ಪಾಣಿವಧೆ, ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಈ ನಿಯಮಗಳ ವಿರುದ್ಧ ಬಿಬಿಎಂಪಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಜಂಟಿ ನಿರ್ದೇಶಕ ಪಶುಪಾಲನಾ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.