ಹಾಸನ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ (H.D Revanna) ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ (A.T Ramaswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಹೊಳೆನರಸೀಪುರ ತಾಲ್ಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರ ಇದ್ದು ಸಹ ನಾಶವಾದ. ಲಂಕೆ ಕೂಡ ಬೂದಿ ಆಯಿತು. ಯಾವುದಕ್ಕೆ ಆರಂಭ ಇರುತ್ತದೆಯೋ ಅದಕ್ಕೆ ಅಂತ್ಯ ಕೂಡ ಇರುತ್ತದೆ ಎಂದು ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿದ ಉಗ್ರರು – ಗುಂಡಿನ ದಾಳಿ
Advertisement
ನನ್ನಂತಹವನಿಗೆ ಹೀಗೆ ಮಾಡಿದ್ದಾರೆ. ನಿಮ್ಮನ್ನು ಬಿಡುತ್ತಾರಾ? ಎಂದು ಕಾರ್ಯಕರ್ತರಿಗೆ ಕರೆಕೊಟ್ಟ ಅವರು, ನೀವೆಲ್ಲಾ ಸ್ವಾಭಿಮಾನಿಗಳಾಗಬೇಕು. ಆತ್ಮಗೌರವದಿಂದ ನಿಲ್ಲಬೇಕು. ಯಾರ ಮುಂದು ಕೈಕಟ್ಟಿ ನಿಲ್ಲಬಾರದು. ಎಲ್ಲಿ ಜೊತೆಗೆ ಕುಳಿತುಕೊಳ್ಳುವ ಸ್ಥಾನಮಾನ ಇರುತ್ತದೆಯೋ ಅಲ್ಲಿಗೆ ಹೋಗಿ ಎಂದಿದ್ದಾರೆ.
Advertisement
Advertisement
ಅವರಿಗೆ ಒಳ್ಳೆಯವರು ಬೇಕಾಗಿಲ್ಲ. ಕೆಲವು ಜನ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ. ಸತ್ಯವನ್ನೇ ಸಾಯಿಸುತ್ತಾರೆ. ಅದನ್ನು ಎದುರಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ರಾಜಕೀಯವಾಗಿ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ದೇವೇಗೌಡರು (H.D. Deve Gowda) ಪ್ರಧಾನಿ ಆಗಿದ್ದವರು. ಈ ದೇಶದ ದೊಡ್ಡ ಹುದ್ದೆಗೆ ಏರಿದ್ದವರು. ಅಂತವರನ್ನೇ ಮನೆಯಿಂದ, ಜಿಲ್ಲೆಯಿಂದ ಹೊರಹಾಕಿದಂತವರು ನನ್ನನ್ನು ಬಿಡುತ್ತಾರಾ? ಅವರು ಎಂಪಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದರೆ ಸರಿ, ಬೇರೆಯವರು ನಿಂತುಕೊಳ್ಳಬಹುದಿತ್ತು. ಆದರೆ ಅವರನ್ನು ತುಮಕೂರಿನಿಂದ ನಿಲ್ಲಿಸಿ ಸೋಲಿಸಿದ್ದನ್ನು ಯಾರು ಮರೆಯುವಂತಿಲ್ಲ ಎಂದು ರೇವಣ್ಣ ವಿರುದ್ಧ ಹರಿಹಾಯ್ದಿದ್ದಾರೆ.
ದೇವೇಗೌಡರನ್ನು ಕೇವಲ ಉತ್ಸವ ಮೂರ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸದ್ಧಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿ ಅವರ ಮಾತನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸರಿಯಾಗಿ ಆಸ್ತಿ ಘೋಷಣೆ ಮಾಡದೆ, ಕೋರ್ಟ್ನಲ್ಲಿ ವಿಚಾರಣೆ ನಡೆದು ಶಿಕ್ಷಯಾಗುವ ಸಂದರ್ಭ ಬಂದಾಗ ರಾಜಿ ಮಾಡಿಕೊಳ್ಳಲು ಸ್ವಾರ್ಥಕ್ಕಾಗಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು ಎಂದಿದ್ದಾರೆ.
ನನ್ನ ಪಕ್ಷದ ಕಾರ್ಯಕರ್ತರು ನನ್ನ ಕುಟುಂಬದವರಿಗಿಂತಲೂ ಹೆಚ್ಚು. ನನ್ನ ಮಕ್ಕಳು ಬೇರೆ ಅಲ್ಲ, ನನ್ನ ಕಾರ್ಯಕರ್ತರು ಬೇರೆ ಅಲ್ಲ ಎಂಬ ಭಾವನೆಯಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನ ಕುಟುಂಬ ಮನೆಗೆ ಮಾತ್ರ ಸೀಮಿತ. ಗಟ್ಟಿ ತಳಪಾಯ ಹಾಕಿಕೊಂಡು ಮುಂದಿನ ರಾಜಕೀಯ ನಿರ್ಧಾರ ತಿಳಿಸುತ್ತೇನೆ. ಮತ್ತೆ ವಿಧಾನಸೌಧಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.
ರೇವಣ್ಣ ಅಧಿವೇಶನದಲ್ಲಿ, ರಾಮಸ್ವಾಮಿ ಪ್ರಾಮಾಣಿಕರು ಅದರಲ್ಲಿ ಬೇರೆ ಮಾತಿಲ್ಲ ಎಂದಿದ್ದಾರೆ. ಅವರ ಒಳಗೊಂದು ಹೊರಗೊಂದು ಇದ್ದರೆ ನಾನೇನು ಮಾಡಲಿ ಎಂದು ಪ್ರತಿಕ್ರಿಸಿದ್ದಾರೆ.
ರೈತರ ಪಕ್ಷ ಎಂದು ಕಟ್ಟಿರುವ ಪಕ್ಷ ಕ್ಷೀಣಿಸುತ್ತಿದೆ ಎಂದು ಮೂರು ವರ್ಷಗಳ ಹಿಂದೆ ಸದನದಲ್ಲಿ ಹೇಳಿದ್ದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಬಲಗೊಳ್ಳುತ್ತಿವೆ. ಹಿಂದಿನಿಂದ ಇದ್ದ ಪ್ರಾದೇಶಿಕ ಪಕ್ಷ ಯಾಕೆ ಕ್ಷೀಣಿಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ರೈತರ ಹೆಸರು ಹೇಳುತ್ತಾರೆ. ರೈತರಿಗೆ ಜಮೀನು ಮಂಜೂರು ಮಾಡಲು ಹೋದರೆ, ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಹೇಳುತ್ತಾರೆ ಇದು ರೈತರ ಪಕ್ಷನಾ? ರೈತರ ಪರವಾಗಿ ಕೆಲಸ ಮಾಡುತ್ತಿದೆಯಾ? ರೈತರ ಹಿತ ಕಾಪಾಡುವ ಕೆಲಸ ಆಗಿದೆಯೇ? ರೈತರು ತಿನ್ನುವ ಅನ್ನಕ್ಕೆ ಕಲ್ಲು ಹಾಕುವ ಜನ ಇದ್ದಾರೆ. ಅದನ್ನು ಎದುರಿಸುವ ಶಕ್ತಿ ನನಗಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.
ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದುಕೊಂಡಿದ್ದಾರೆ ಅದು ಸಾಧ್ಯವಿಲ್ಲ. ನಾನು ಮತ್ತೆ ಶಾಸಕನಾಗುತ್ತೇನೆ. ನೆಲ ಹಾಗೂ ಜನರ ರಕ್ಷಣೆಗೆ ನನ್ನ ತಲೆ ಬೇಕಾದ್ರೂ ತೆಗೆಯಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕಿಡ್ನಿ ಮಾರಿ ದುಡ್ಡು ಕೊಡ್ತೀನಿ.. ನಮ್ಮ ನಾಯಕರಿಗೆ ಟಿಕೆಟ್ ಕೊಡಿ – ಯುವಕನ ಹುಚ್ಚಾಟ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k