ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ರಮೇಶ್ ಅರವಿಂದ್ (Ramesh Aravind) ಅಭಿನಯದ ಪತ್ತೇದಾರಿ ಚಿತ್ರ ‘ಶಿವಾಜಿ ಸುರತ್ಕಲ್’ ಮುಂದುವರೆದ ಭಾಗ ‘ಶಿವಾಜಿ ಸುರತ್ಕಲ್ – ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ (Shivaji Suratkal 2) ಇದೇ ಶುಕ್ರವಾರ (ಏಪ್ರಿಲ್ 14) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Advertisement
‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಮೂಲಕ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ (Akash Srivatsa) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೊದಲ ಭಾಗದಂತೆಯೇ ಈ ಚಿತ್ರವು ಸಹ ಒಂದು ಮರ್ಡರ್ ಮಿಸ್ಟ್ರಿಯಾಗಿದ್ದು, ಚಿತ್ರದಲ್ಲಿ ನಡೆಯುವ ಕೊಲೆಗಳಿಗೂ, ನಾಯಕ ಶಿವಾಜಿಗೂ ಒಂದು ನಂಟಿರುತ್ತದೆ. ಆ ನಂಟೇನು? ಕೊಲೆಗಳ ಹಿಂದಿರುವ ರಹಸ್ಯವೇನು? ಮತ್ತು ಕೊಲೆಗಾರ ಯಾರು? ಎಂಬುದೇ ಈ ಚಿತ್ರದ ಹೂರಣ.
Advertisement
Advertisement
‘ಮೊದಲ ಭಾಗ ನೋಡಿದವರಿಗೆ ಈ ಚಿತ್ರವು ಖಂಡಿತಾ ಇಷ್ಟವಾಗುತ್ತದೆ. ಇಲ್ಲಿ ಕೊಲೆಗಳ ಜೊತೆಗೆ ಮನರಂಜನೆ ಮತ್ತು ಭಾವನಾತ್ಮಕ ಸನ್ನಿವೇಶಗಳು ಸಹ ಇದೆ. ಚಿತ್ರ ನೋಡುತ್ತಿದ್ದಂತೆ ಇಲ್ಲಿ ಎರಡು ಪಾತ್ರಗಳಿವೆಯೋ ಅಥವಾ ನಾಯಕನ ಮನಸ್ಸಿನಲ್ಲಿ ಆಗುವ ತಳಮಳಗಳೋ ಎಂಬ ಪ್ರಶ್ನೆ ಪ್ರೇಕ್ಷಕರಿಗೆ ಕಾಡುತ್ತದೆ. ಕನ್ನಡದಲ್ಲಿ ಇದೊಂದು ವಿಭಿನ್ನವಾದ ಪ್ರಯತ್ನ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ನಿರ್ದೇಶಕ ಆಕಾಶ್ ಶ್ರೀವತ್ಸ.
Advertisement
‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್, ರಾಧಿಕಾ ನಾರಾಯಣ್ (Radhika Narayan) , ಮೇಘನಾ ಗಾಂವ್ಕರ್ (Meghana Gaonkar), ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ನಾಜರ್, ರಮೇಶ್ ಭಟ್, ವೀಣಾ ಸುಂದರ್, ವಿನಾಯಕ್ ಜೋಶಿ, ಶೋಭರಾಜ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರಕ್ಕೆ ಬೆಂಗಳೂರು, ಮೈಸೂರು, ಹೈದರಾಬಾದ್, ಸುರತ್ಕಲ್, ಕಾಪು, ಹೊನ್ನಾವರ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಗುರುಪ್ರಸಾದ್ ಮತ್ತು ಮಧು ಅಂಬಟ್ ಅವರ ಛಾಯಾಗ್ರಹಣ ಹಾಗೂ ಜೂಡಾ ಸ್ಯಾಂಡಿ ಸಂಗೀತವಿದೆ. ನಿರ್ದೇಶಕ ಆಕಾಶ್ ಶ್ರೀವತ್ಸ ಅವರೇ ಚಿತ್ರದ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.