ಬೆಂಗಳೂರು: ಸಿಂಧಗಿ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾದ ಭೂಸನೂರು ರಮೇಶ್ ಬಾಳಪ್ಪ ಅವರು ಶಾಸಕರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಭೂಸನೂರು ರಮೇಶ್ ಬಾಳಪ್ಪ ಅವರು ಶಾಸಕರಾಗಿ ಭಗವಂತನ ಹೆಸರಿನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ರೂ ಕ್ರಮ ಆಗ್ಲೇಬೇಕು: ಕೆ.ಬಿ.ಕೋಳಿವಾಡ
Advertisement
Advertisement
ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
15ನೇ ವಿಧಾನಸಭೆಗೆ ಅಕ್ಟೋಬರ್ ನಡೆದ ಉಪಚುನಾವಣೆಯಲ್ಲಿ ಸಿಂಧಗಿ ವಿಧಾನಸಭಾ ಕ್ಷೇತ್ರದಿಂದ ರಮೇಶ್ ಭೂಸನೂರು ಅವರು 30 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದರು.