-ಲಿಂಬಾವಳಿಗೆ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ
ನವದೆಹಲಿ: ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಅವರು ಪಕ್ಷಕ್ಕೆ ಹೊಸಬರು, ಅವರಿಗೆ ಬಿಜೆಪಿಯ ತತ್ವ ಸಿದ್ಧಾಂತವೇ ಗೊತ್ತಿಲ್ಲ, ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ, ತಮಿಳುನಾಡು ಎಸ್‌ಸಿ ಮೋರ್ಚಾ ಪ್ರಭಾರಿ ಡಾ. ವೆಂಕಟೇಶ್ ಮೌರ್ಯ ಪ್ರಶ್ನಿಸಿದರು.ಇದನ್ನೂ ಓದಿ:ಮೈಕ್ರೋ ಫೈನಾನ್ಸ್ ಹೆಸರಲ್ಲಿ ಕಿರುಕುಳ ಕೊಡುವವರಿಗೆ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣ ಹೆಚ್ಚಳ – ಪರಮೇಶ್ವರ್
Advertisement
Advertisement
ನವದೆಹಲಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತಕ್ಕೆ ಎಲ್ಲರೂ ಕೆಲಸ ಮಾಡಬೇಕು, ಬಂಡಾಯ ಸಾರಿ ದೆಹಲಿಗೆ ಬರುವುದು ಕಾರ್ಯಕರ್ತರಲ್ಲಿ ಗೊಂದಲ ಹೆಚ್ಚುತ್ತದೆ. ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಅವರು ಪಕ್ಷಕ್ಕೆ ಹೊಸಬರು ಅವರಿಗೆ ಬಿಜೆಪಿಯ ತತ್ವ ಸಿದ್ಧಾಂತವೇ ಗೊತ್ತಿಲ್ಲ ಅವರು ಮಾತನಾಡುತ್ತಾರೆ. ಆದರೆ ಅರವಿಂದ್ ಲಿಂಬಾವಳಿ ಅವರು ಹಿರಿಯ ನಾಯಕರು, ಅವರಿಗೆ ಪಕ್ಷದ ಸಿದ್ಧಾಂತ ಗೊತ್ತಿದೆ ಅವರು ಸಾಕಷ್ಟು ಜವಾಬ್ದಾರಿ ನಿಭಾಯಿಸಿದ್ದಾರೆ. ಅವರು ರಾಜ್ಯಧ್ಯಕ್ಷರ ಬದಲಾವಣೆ ಬಗ್ಗೆ ಕುಟುಂಬ ರಾಜಕೀಯದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಅವರ ಶ್ರೀಮತಿ ಅವರು ಬಿಜೆಪಿ ಶಾಸಕರಲ್ಲವಾ? ಅದು ಕುಟುಂಬ ರಾಜಕೀಯ ಅಲ್ಲವಾ? ಅವರಿಗೆ ಕುಟುಂಬ ರಾಜಕೀಯದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹರಿಹಾಯ್ದರು.
Advertisement
ರಾಷ್ಟ್ರೀಯ ನಾಯಕರು ಇಂತಹ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು, ಕಾರ್ಯಕರ್ತರಲ್ಲಿ ಗೊಂದಲ ಸೃಷ್ಠಿಯಾಗದಂತೆ ನೋಡಿಕೊಳ್ಳಬೇಕು, ಯಾವುದೇ ನಾಯಕರು ತಕರಾರು ಇದ್ದಲ್ಲಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು, ಹಿರಿಯ ನಾಯಕರ ಗಮನಕ್ಕೆ ತರಬೇಕು, ಅದು ಬಿಟ್ಟು ಬಹಿರಂಗವಾಗಿ ಮಾತನಾಡುವುದು ಸೂಕ್ತವಲ್ಲ ಎಂದರು.ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ