ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಮೈತ್ರಿ ನಾಯಕರಿಗೆ ಸರ್ಕಾರ ಉಳಿಸಿಕೊಳ್ಳುವ ಸವಾಲು ಮುಂದಾಗಿದೆ. ಇದೇ ಸಮಯದಲ್ಲಿ ಹೊಸ ಅತೃಪ್ತ ಶಾಸಕರು ಹೊಸ ಬೇಡಿಕೆಗಳನ್ನು ಮೈತ್ರಿ ನಾಯಕರ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಅತೃಪ್ತರ ಕಂಡೀಷನ್ ಕೇಳಿದ ಸಿಎಂ ಕುಮಾರಸ್ವಾಮಿ ಒಂದು ಕ್ಷಣ ಶಾಕ್ ಆಗಿದ್ದು, ಬೇಡಿಕೆಗಳನ್ನು ಈಡೇರಿಸುತ್ತಾರಾ ಪ್ರಶ್ನೆ ಹುಟ್ಟಿಕೊಂಡಿದೆ.
Advertisement
ಏನದು ಕಂಡಿಷನ್?
ನಮಗೆ ಸಂಪುಟದಲ್ಲಿ ಸಚಿಬ ಸ್ಥಾನವೂ ಬೇಡ. ನಿಗಮ ಮಂಡಳಿಯೂ ಬೇಡ. ಮುಂದಿನ ದಿನಗಳಲ್ಲಿ ಮೈತ್ರಿ ಸರ್ಕಾರದ ಪರವಾಗಿ ಇರಬೇಕಾದ್ರೆ ಸಿದ್ದರಾಮಯ್ಯರನ್ನು ಮತ್ತೆ ಸಿಎಂ ಮಾಡಿ ಎಂಬ ಷರತ್ತನ್ನು ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಬಿ.ಸಿ.ಪಾಟೀಲ್ ಇಟ್ಟಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುವುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
Advertisement
Advertisement
ಬೆಂಗಳೂರಿನ ನಿವಾಸದಲ್ಲಿರುವ ಶಾಸಕ ಬಿಸಿ ಪಾಟೀಲ್ ಮಾಧ್ಯಮಗಳ ಜೊತೆ ಮಾತನಾಡಿ, ಸರ್ಕಾರದ ವಿರುದ್ಧ ನನಗೆ ಅಸಮಾಧಾನ ಅನ್ನುವ ಪ್ರಶ್ನೆಯೇ ಇಲ್ಲ. ಏಕೆಂದರೆ ನನಗೆ ಸಮಾಧಾನವೇ ಆಗಿಲ್ಲ. ನನಗೆ ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನ ಇದ್ದೇ ಇದೆ. ಜಿಲ್ಲೆಯಲ್ಲಿ ಏಕೈಕ ಶಾಸಕನಾಗಿ ಆಯ್ಕೆ ಆಗಿದ್ದರೂ ಕೂಡ ಮಂತ್ರಿ ಸ್ಥಾನ ನೀಡಿಲ್ಲ ಎಂದರು. ಅಲ್ಲದೇ ರಮೇಶ್ ಜಾರಕಿಹೊಳಿ ಅವರನ್ನು ನಾನು ಈಗ ಭೇಟಿ ಮಾಡಿಲ್ಲ. ಇದೇ ವೇಳೆ ಬಿಜೆಪಿ ಸೇರ್ಪಡೆ ಬಗ್ಗೆ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾನು ಸನ್ಯಾಸಿಯಲ್ಲ ನನ್ನೂರಿನ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ಜನ ಏನು ಹೇಳುತ್ತಾರೆ ಅದನ್ನು ಕೇಳೋಣ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.