ಬೆಳಗಾವಿ: ಮಹಾರಾಷ್ಟ್ರದ (Maharashtra) ನೂತನ ಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಅವರನ್ನು ಬಿಜೆಪಿ ರೆಬೆಲ್ ತಂಡ (BJP Rebel Team) ಭೇಟಿಯಾಗಿ ಶುಭ ಹಾರೈಸಿದೆ.
ರಮೇಶ್ ಜಾರಕಿಹೊಳಿ, ಶ್ರೀಮಂತ್ ಪಾಟೀಲ್, ಎನ್.ಆರ್ ಸಂತೋಷ್ ನಾಗ್ಪುರದಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಿ ಶುಭಹಾರೈಸಿ ಕರ್ನಾಟಕ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.
Advertisement
Advertisement
ವಕ್ಫ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ ವಿಚಾರವನ್ನು ಗಮನಕ್ಕೆ ಜಾರಕಿಹೊಳಿ (Ramesh Jarkiholi ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ದಿನಾಂಕ ನಿಗದಿಯಾದ ಬಳಿಕ ನಿಮ್ಮನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.
Advertisement
ಈ ಸಂದರ್ಭದಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರ್ಯ ವೈಖರಿ ಕುರಿತು ಕೂಡ ಫಡ್ನವಿಸ್ ಜೊತೆ ಚರ್ಚೆ ನಡೆಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
Advertisement