ಚಿಕ್ಕೋಡಿ: ಗೋಕಾಕ್ ಕ್ಷೇತ್ರ ಅಭಿವೃದ್ಧಿಯಾಗಿಲ್ಲ ಎಂದರೆ ಸ್ಥಳದಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಆಗಿಲ್ಲ ಎಂದು ಸತೀಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಜಾರಕಿಹೊಳಿ ಸತೀಶ್ ಜಾರಕಿಹೊಳಿಗೆ ಚಾಲೆಂಜ್ ಮಾಡುತ್ತೇನೆ. ರಸ್ತೆ ಕೆಟ್ಟಿದೆ, ರಸ್ತೆಯೇ ಇಲ್ಲ ಎಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು.
Advertisement
Advertisement
ಮೂಲ ಜಗಳ ಆರಂಭವಾಗಿದ್ದೇ ಅಥಣಿ ಮತಕ್ಷೇತ್ರಕ್ಕಾಗಿ. ಅಲ್ಲಿ ನೀರಾವರಿ ಯೋಜನೆ ಅನುಷ್ಠಾನ ಮಾಡದಿರುವುದಕ್ಕೆ ನಾನು ಕಾಂಗ್ರೆಸ್ ತೊರೆದಿದ್ದೆ. ಆದರೆ ಅಥಣಿ ಮತಕ್ಷೇತ್ರದ ಅಭಿವೃದ್ಧಿಯನ್ನು ಬಿಜೆಪಿ ಮಾಡುತ್ತದೆ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್
Advertisement
ನಾನು ಹಾಗೂ ಮಹೇಶ್ ಕುಮಟಳ್ಳಿ ಸಚಿವರಾಗುವುದರ ಬಗ್ಗೆ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದ ಅವರು, ಲಖನ್ ಜಾರಕಿಹೊಳಿ ಸ್ವತಂತ್ರರು. ಅವರ ಹೇಳಿಕೆ ಬಗ್ಗೆ ನನಗೆ ಮಾಹಿತಿಯಿಲ್ಲ. ಲಕ್ಷ್ಮಣ ಸವದಿ ನಾವು ಒಂದೇ ಪಕ್ಷದಲ್ಲಿ ಇರುವ ಕಾರಣ ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್
Advertisement
ಬೆಳಗಾವಿ ಶಾಸಕರ ನಿಯೋಗ ಸಿಎಂ ಬಳಿ ಏನೂ ಹೇಳಿದೆ ಎನ್ನುವುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ಕರೆದು ಕೇಳಿದಾಗ ಉತ್ತರ ಕೊಡುತ್ತೇನೆ. ಉಮೇಶ್ ಕತ್ತಿ ಅವರ ಹೇಳಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದ ಅವರು ಬೆಳಗಾವಿ ರಾಜಕಾರಣದಲ್ಲಿ ಭಿನ್ನಮತ ವಿಚಾರ ಬಗೆಹರಿಸಲು ಬಾಲಚಂದ್ರ ಜಾರಕಿಹೊಳಿ ಮುಂದಾಳತ್ವ ವಹಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಹಾಗೂ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಸೇರಿದಂತೆ ರಮೇಶ ಜಾರಕಿಹೊಳಿ ಬೆಂಬಲಿಗರು ಉಪಸ್ಥಿತರಿದ್ದರು.