ಬಾಗಲಕೋಟೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಾಮಾಣಿಕ ವ್ಯಕ್ತಿ. ಅವರು ಪಕ್ಷ ಬಿಟ್ಟು ಹೋಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬದಾಮಿಯಲ್ಲಿ ಮಾತನಾಡಿದ ಮಾಜಿ ಸಿಎಂ, ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೋಗಲ್ಲ. ಕಾಂಗ್ರೆಸ್‍ನಲ್ಲಿಯೇ ಇರುತ್ತಾರೆ. ದೆಹಲಿ ಪ್ರವಾಸ ಸುಳ್ಳು ಮಾಹಿತಿಯಾಗಿದ್ದು, ಅವರು ಬೆಳಗಾವಿಯಲ್ಲೇ ಇದ್ದಾರೆ. ಆದರೆ ಫೋನ್‍ಗೆ ಸಿಗುತ್ತಿಲ್ಲ ಅಷ್ಟೇ. ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ಜೊತೆಗೆ ನಾನು ಮಾತಾಡಿದ್ದೇನೆ. ಸಚಿವ ಸ್ಥಾನ ಕಳೆದುಕೊಂಡಿದ್ದಕ್ಕೆ ಅವರಿಗೆ ಸ್ವಲ್ಪ ಅಸಮಾಧಾನ ಇದೆ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು. ಇದನ್ನು ಓದಿ: ಇರೋ ಒಬ್ಬ ಮಗನ ಮೇಲಾಣೆ ಸಾಲಮನ್ನಾ ಮಾಡ್ತೀನಿ: ಸಿಎಂ
ರಮೇಶ್ ಜಾರಕಿಹೊಳಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತಿದ್ದಾರೆ ಎನ್ನುವುದು ಸುಳ್ಳು. ಬಿಜೆಪಿಯವರು ಸುಳ್ಳು ಹೇಳುತ್ತಾರೆ. ಅದಕ್ಕೆಲ್ಲಾ ಪ್ರತಿಕ್ರಿಯೆ ಕೊಡಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.
ವಿವಿಧ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಹಾಕೂಟದಲ್ಲಿ ಆಯೋಜಿಸಿದ್ದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಲು ಇಂದು ಬದಾಮಿಗೆ ಆಗಮಿಸಿದ್ದರು. ಈ ವೇಳೆ ಬದಾಮಿ ಗೃಹ ಕಚೇರಿಯಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv