ಬೆಂಗಳೂರು: ಸಂಪುಟ ಸಭೆಯ ವೇಳೆ ಅರ್ಧಕ್ಕೆ ಎದ್ದು ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಹೊರ ನಡೆದಿದ್ದಾರೆ. ಇವರ ಈ ನಡೆ ಈಗ ಮೈತ್ರಿ ಸರ್ಕಾರದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಕಬ್ಬು ಬೆಳೆಗಾರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸಭೆ ಕರೆದಿದ್ದರು. ಈ ಸಭೆಯಲ್ಲಿ ಸಿಎಂ ಕೇಳಿದ ಪ್ರಶ್ನೆಯಿಂದ ಅಸಮಾಧಾನಗೊಂಡು ಹೊರನಡೆದಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.
Advertisement
Advertisement
ಸಭೆಯಲ್ಲಿ ನಿಮ್ಮ ಕಾರ್ಖಾನೆಯಿಂದಲೇ ರೈತರಿಗೆ ಸಾಕಷ್ಟು ಹಣ ಬಾಕಿ ಇದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ನೀವೇ ಮಾತನಾಡುತ್ತಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿ ರೈತ ಮುಖಂಡರ ಜೊತೆ ಮಾತನಾಡಬೇಕಿತ್ತು. ಮಾತನಾಡದ ಕಾರಣ ಈಗ ಇಲ್ಲಿಯವರೆಗೆ ತಲುಪಿದೆ ಎಂದು ಸಿಎಂ ಖಾರವಾಗಿ ಪ್ರಶ್ನೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.
Advertisement
ಎಚ್.ಡಿ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಚಿವ ರಮೇಶ್ ಜಾರಕಿಹೊಳಿ ಸಭೆಯಿಂದ ಹೊರ ನಡೆದಿದ್ದಾರೆ. ಅಷ್ಟೇ ಅಲ್ಲದೆ ವಿಧಾನ ಸೌಧದ ಉತ್ತರ ಬಾಗಿಲಿನಲ್ಲಿ ಮಾಧ್ಯಮದವರು ಇರುತ್ತಾರೆ ಎನ್ನುವ ಕಾರಣಕ್ಕೆ ಮಾರ್ಗ ಬದಲಿಸಿ ಪಶ್ಚಿಮ ಬಾಗಿಲಿನ ಮೂಲಕ ಹೊರ ಬಂದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews