ಚಿಕ್ಕೋಡಿ: ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಕಾಗವಾಡ ಮತಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕ ರಾಜು ಕಾಗೆ ಅವರ ಮನೆಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.
Advertisement
ಕಾಗವಾಡ ತಾಲೂಕಿನ ಶಿರಗುಪ್ಪಿ, ಉಗಾರ ಹಾಗೂ ಉಗಾರ ಬಿ.ಕೆ ಗ್ರಾಮಗಳಿಗೆ ರಮೇಶ್ ಜಾರಕಿಹೊಳಿ ಭೇಟಿ ನೀಡುವುದರ ಜೊತೆಗೆ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ರಾಜು ಕಾಗೆ ಮನೆಗೆ ಭೇಟಿ ನೀಡಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗುಪ್ತ ಚರ್ಚೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ಕಾಗೆ ಅವರಿಗೆ ಅನಾರೋಗ್ಯ ಇದೆ. ಹೀಗಾಗಿ ಅವರನ್ನು ಭೇಟಿಯಾಗಲು ಬಂದಿದ್ದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಾವಿನ ಮರಿ ಬೆಂದ ಉಪ್ಪಿಟ್ಟು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ
Advertisement
ಕಾಂಗ್ರೆಸ್‌ನಿಂದ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆಯಿಂದ ಲಖನ ಅವರಿಗೆ ಮುಳವಾಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೆಬ್ಬಾಳಕರ ಪಕ್ಷ ಬೇರೆ ನಮ್ಮ ಪಕ್ಷ ಬೇರೆ. ನಮ್ಮ ಪಕ್ಷದಿಂದ ಮಹಾಂತೇಶ ಕವಟಗಿಮಠ ಸ್ಪರ್ಧೆ ಮಾಡುತ್ತಾರೆ. ನಾವೂ ಲಖನ ಜಾರಕಿಹೊಳಿ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಕೇಳಿಲ್ಲ. ನಾನಂತೂ ಮಹಾಂತೇಶ ಕವಟಗಿಮಠ ಪರವಾಗಿ ಪ್ರಚಾರ ಮಾಡುತ್ತೇನೆ. ಈಗಾಗಲೇ ಪ್ರತಿ ತಾಲೂಕಿಗೂ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಒಬ್ಬರು ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವ್ರಿಗೆ ಮಾನ-ಮರ್ಯಾದೆ ಇಲ್ಲ, ರಾಕೇಶ್ ಈಗ ಬದುಕಿದ್ದಾರಾ?- ಸಿದ್ದು ಗರಂ
Advertisement
Advertisement
ರಾಜಕೀಯ ದೃಷ್ಟಿಯಿಂದ ಹೇಳುವುದಾದರೆ ಬಿಟ್ ಕಾಯಿನ್ ಅಂದರೇನು ನನಗೆ ಗೊತ್ತೆ ಇಲ್ಲಾ. ಬಿಟ್ ಕಾಯಿನ್ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದರು.