ಬೆಳಗಾವಿ: ನಾನು ಬಿಜೆಪಿ ಪಕ್ಷದ ಶಾಸಕ. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಕಾಂಗ್ರೆಸ್ ಸೋಲಿಸುವುದೇ ನಮ್ಮ ಗುರಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
Advertisement
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಥಮ ಆದ್ಯತೆ ಬಿಜೆಪಿ ಗೆಲ್ಲಬೇಕು ಎನ್ನುವುದೇ ಆಗಿದೆ. ಕಾಂಗ್ರೆಸ್ ಸೋಲಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ಜಿಲ್ಲೆಯಾದ್ಯಂತ ಒಳ್ಳೆಯ ವಾತಾವರಣ ಇದೆ. ಸ್ಥಳೀಯ ಸಂಸ್ಥೆಗಳ 300ಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ
Advertisement
ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಸತೀಶ್ ಜಾರಕಿಹೊಳಿ ಅವರ ಆರೋಪ ಕುರಿತು ಪ್ರತಿಕ್ರಿಯಿಸಿ, ಕಾನೂನಿನಲ್ಲಿ ಅವಕಾಶ ಇದ್ದರೆ ಮುಂದಿನ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಸೂಚಿಸುವ ಕಡೆಯಲ್ಲೇ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ ನಡೆಸೋಣ. ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.
Advertisement
Advertisement
ಕಾಂಗ್ರೆಸ್ ಕಾಲು ಕುಸಿಯುತ್ತಿದೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ರಾಜ್ಯದಲ್ಲಿ ಒಂದು ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. 2023 ರಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೆ ಬರುತ್ತದೆ ಎನ್ನುವ ಹತಾಶೆಯಲ್ಲಿ ಕಾಂಗ್ರೆಸ್‌ನವರು ಹೀಗೆ ಮಾತನಾಡುತ್ತಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ನಾನು ಮುಖ್ಯಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಮುರುಗೇಶ್ ನಿರಾಣಿ