ಬೆಳಗಾವಿ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಡಲು ಶಾಸಕ ರಮೇಶ್ ಜಾರಕಿಹೊಳಿ ತಯಾರು ನಡೆಸಿದ್ದು, ರಾತ್ರೋರಾತ್ರಿ ಮುಂಬೈ ಹೋಟೆಲ್ ಖಾಲಿ ಮಾಡಿದ್ದಾರೆ.
ಶಾಸಕ ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೇ ಮಹೇಶ್ ಕುಮಟಳ್ಳಿ ಕೂಡ ರಾತ್ರೋರಾತ್ರಿ ಮುಂಬೈ ಹೋಟೆಲಿನಿಂದ ಹೊರಟ್ಟಿದ್ದು, ಈಗ ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಪ್ರಯಾಣ ಬೆಳಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ಸಭೆಗೆ ಇಬ್ಬರು ಹಾಜರಾಗುತ್ತಿದ್ದು, ಸಿಎಲ್‍ಪಿ ಸಭೆಯಲ್ಲಿ ಗದ್ದಲ ಎಬ್ಬಿಸಲು ರಮೇಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನೇ ಟಾರ್ಗೆಟ್ ಮಾಡಿಕೊಂಡಿದ್ದು, ಸಭೆಯಲ್ಲಿ ರಾಜಕೀಯ ಹೈಡ್ರಾಮ ಮತ್ತು ಭಿನ್ನಮತ ಚಟುವಟಿಕೆಗಳಿಗೆ ಡಿಕೆಶಿ ಕಾರಣರಾಗಿದ್ದಾರೆ ಎಂದು ಆರೋಪಿಸುವ ಸಾಧ್ಯತೆಯಿದೆ.
Advertisement
Advertisement
ಅಷ್ಟೇ ಅಲ್ಲದೇ ನಾವು ಈ ರೀತಿ ಊರು ಬಿಟ್ಟು ದೂರ ದೂರ ಅಡ್ಡಾಡುತ್ತಿದ್ದೇವೆ ಎನ್ನುವ ವಿಚಾರ ಹೈಕಮಾಂಡ್‍ಗೂ ಗೊತ್ತಾಗಬೇಕು. ಯಾಕೆ ಮುಂಬೈನಲ್ಲಿ ಇದ್ದೀವಿ? ಮುಂಬೈನಲ್ಲಿ ಏನೆಲ್ಲಾ ಚರ್ಚೆ ನಡೆಸಿದ್ದೇವೆ ಇದೆಲ್ಲವನ್ನು ಸಭೆಯ ಮುಂದಿಡಲಿದ್ದು, ಬಳಿಕ ತಮ್ಮ ಮುಂದಿನ ನಡೆ ಏನೆಂಬುದನ್ನು ಸಭೆಯಲ್ಲಿ ತಿಳಿಸುವ ಸಾಧ್ಯತೆ ಇದೆ.
Advertisement
ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಅತೃಪ್ತ ಶಾಸಕರ ಸಂಧಾನಕ್ಕೆ ಗುರುವಾರ ಬೆಳಗಾವಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂದಿದ್ದರು. ಆದರೆ ಸಂಧಾನ ವಿಫಲವಾಗಿದೆ. ಸಿದ್ದರಾಮಯ್ಯ ಅವರು ಮುಂಬೈ ಹೋಟೆಲ್ ನಲ್ಲಿ ತಂಗಿದ್ದ ಅತೃಪ್ತ ಶಾಸಕರಿಗೆ ದೂರವಾಣಿ ಮುಖಾಂತರ ಸಂಪರ್ಕ ಸಾಧಿಸಲು ಯತ್ನಿಸಿದ್ದಾರೆ. ಅಷ್ಟೇ ಅಲ್ಲದೇ ರಮೇಶ್ ಜಾರಕಿಹೊಳಿಗೆ ಹಲವು ಬಾರಿ ಫೋನ್ ಮಾಡಿದ್ದಾರೆ. ಆದರೆ ಜಾರಕಿಹೊಳಿ ಸಿದ್ದರಾಮಯ್ಯರ ಫೋನ್ ಸ್ವೀಕರಿಸಿಲ್ಲ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಅತೃಪ್ತ ಶಾಸಕರನ್ನ ಮನವೊಲಿಸಿ ಸಿಎಲ್‍ಪಿ ಸಭೆಗೆ ಹಾಜರಾಗುವಂತೆ ಸಂಧಾನ ಮಾಡಲು ಹೈ ಕಮಾಂಡ್ ಆದೇಶ ನೀಡಿತ್ತು. ಆದರೆ ರಮೇಶ್ ಜಾರಕಿಹೊಳಿ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಸಬೂಬು ಹೇಳಿ ಸಿದ್ದರಾಮಯ್ಯ ಸುಮ್ಮನಾಗಿದ್ದಾರೆ. ಹೀಗಾಗಿ ಇಂದಿನ ಶಾಸಕಾಂಗ ಸಭೆಯಲ್ಲಿ ಅತೃಪ್ತರ ನಡೆ ಏನು ಎನ್ನುವುದು ಕುತೂಹಲಕಾರಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv