ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ – ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ

Public TV
2 Min Read
Ramesh Katti

– ಅಕ್ಟೋಬರ್ 8ರ ಒಳಗೆ ಹೊಸ ಅಧ್ಯಕ್ಷರ ಆಯ್ಕೆ; ಬಾಲಚಂದ್ರ ಜಾರಕಿಹೊಳಿ

ಬಳ್ಳಾರಿ/ಬೆಳಗಾವಿ: ಬೆಳಗಾವಿ ವಿಭಾಗದ ಡಿಸಿಸಿ ಬ್ಯಾಂಕ್‌ನಲ್ಲಿ (DCC Bank) ಭಿನ್ನಮತ ಸ್ಫೋಟಗೊಂಡಿದ್ದು, ಈ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ (Ramesh Katti) ಶುಕ್ರವಾರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಮೇಶ್‌ ಕತ್ತಿ ರಾಜೀನಾಮೆ ನೀಡಿದ ಕೆಲ ಹೊತ್ತಿನಲ್ಲೇ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ಸುದ್ದಿಗೋಷ್ಠಿ ನಡೆಸಿದ್ದಾರೆ. ಜಾರಕಿಹೊಳಿಗೆ 14 ಜನ ಡಿಸಿಸಿ ಬ್ಯಾಂಕ್ ನಿರ್ದೇಶಕರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದ ರಾಜಕೀಯ ಬೆಳವಣಿಗೆಗಳು ಸರಿಯಲ್ಲ, ಹೀಗೆ ಮುಂದುವರಿದ್ರೆ ಜನ ಕಲ್ಲಲ್ಲಿ ಹೊಡೀತಾರೆ: ಡಿ.ಕೆ.ಸುರೇಶ್

DCC Bank

ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ಕೊಟ್ಟಿದ್ದಾರೆ. ಡಿಸಿಸಿ ಬ್ಯಾಂಕ್‌ಗೆ 2020ರಲ್ಲಿ ಎಲ್ಲರನ್ನ ಅವಿರೋಧವಾಗಿ ಆಯ್ಕೆ ಮಾಡಿದ್ವಿ. 4 ವರ್ಷಗಳ ಕಾಲ ರಮೇಶ್ ಕತ್ತಿ ಅಧ್ಯಕ್ಷರಾಗಿದ್ದಾರೆ. ಕಳೆದ 1 ವರ್ಷದಿಂದ ಸಾಕಷ್ಟು ಭಿನ್ನಾಭಿಪ್ರಾಯ ಇತ್ತು. ಒಂದು ವರ್ಷ ಉಳಿದಿದ್ದು ಹೀಗಾಗಿ ರಮೇಶ್ ಕತ್ತಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಹೇಳಿದ್ವಿ. ಹೀಗಾಗಿ ರಮೇಶ್ ಕತ್ತಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಿಂಗಳ ಒಳಗಾಗಿ ಹೊಸ ಅಧ್ಯಕ್ಷರ ಆಯ್ಕೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಪ್ರಭಾಕರ್ ಕೋರೆ, ರಮೇಶ್ ಕತ್ತಿ ಎಲ್ಲರೂ ಸೇರಿ ಅಧ್ಯಕ್ಷ ಆಯ್ಕೆ ಮಾಡ್ತಾರೆ. ಯಾರ ಒತ್ತಾಯ ಮಾಡದೇ, ಹೆದರಿ ರಾಜೀನಾಮೆ ಕೊಟ್ಟಿಲ್ಲ. ಅಕ್ಟೋಬರ್ 8ರ ಒಳಗಾಗಿ ಹೊಸ ಅಧ್ಯಕ್ಷರ ಆಯ್ಕೆ ಮಾಡ್ತೀವಿ. 17 ಜನ ಸದಸ್ಯರು ಒಂದಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತಿದ್ದೇವೆ. ರಮೇಶ್ ಕತ್ತಿಯವರೂ ಹೊಸ ಅಧ್ಯಕ್ಷ ಆಯ್ಕೆಗೆ ಬರ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೇಣುಕಾ ಮುಖ ನಾಯಿ ಕಚ್ಚಿ ತಿಂದಿದೆ, ದರ್ಶನ್ ಹೊಡೆದಿಲ್ಲ: ಕೋರ್ಟ್‌ನಲ್ಲಿ ವಕೀಲ ಸಿ.ವಿ ನಾಗೇಶ್ ವಾದ ಹೇಗಿತ್ತು?

ಕಳೆದ ವರ್ಷ 30 ಕೋಟಿ ರೂ. ಲಾಭ ಮಾಡಿದ್ದಾರೆ. ಹೊಸ ಅಧ್ಯಕ್ಷರನ್ನ ಆಯ್ಕೆ ಮಾಡೋಣ ಅಂದಿದ್ದಕ್ಕೆ ಬಿಟ್ಟು ಕೊಟ್ಟಿದ್ದಾರೆ. ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಯಾವ ಬಣ ಇಲ್ಲ. ಬಿಜೆಪಿ, ಕಾಂಗ್ರೆಸ್ ಎಲ್ಲಾ ಪಕ್ಷದವರು ಇದ್ದಾರೆ. ಈ ಬಾರಿ ನಬಾರ್ಡ್ ದಿಂದ ಹಣ ಬರಲು ತಡವಾಯಿತು. ಬಿರೇಶ್ವರ ಸಂಸ್ಥೆಯಿಂದ 250 ಕೋಟಿ ರೂ. ಜೊಲ್ಲೆಯವರು ಡೆಪಾಸಿಟ್ ಮಾಡಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

Share This Article