ರೈತರಿಗೆ ದಾಖಲೆ ನೀಡಲು ಸತಾಯಿಸುತ್ತಿದ್ದ ಅಧಿಕಾರಿಗಳಿಗೆ ತರಾಟೆ- ಸೂ….ಮಕ್ಕಳು ಎಂದ ರಮೇಶ್ ಕುಮಾರ್

Public TV
1 Min Read
kolar ramesh kumar

– ತರಾಟೆ ತೆಗೆದುಕೊಳ್ಳುವ ಭರದಲ್ಲಿ ಅವಾಚ್ಯ ಶಬ್ದ ಬಳಕೆ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇತ್ತೀಚೆಗೆ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಘಟನೆ ಮಾಸುವ ಮುನ್ನವೇ ಇದೀಗ ಕಂದಾಯ ಇಲಾಖೆ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹೀಗೆ ಮಾತನಾಡುವ ಭರದಲ್ಲಿ ಅವಾಚ್ಯ ಶಬ್ದಗಳ ಬಳಕೆಯಾಗಿದ್ದು, ಸೂ…ಮಕ್ಕಳು ಎಂದು ಹೇಳಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶ್ರೀನಿವಾಸಪುರ ಪಟ್ಟಣದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಸಮ್ಮುಖದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣೆ ಸಲುವಾಗಿ ಚರ್ಚಿಸಲು ನಡೆದ ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಭೆಯಲ್ಲಿ ರಮೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ಡಿಸಿಸಿ ಬ್ಯಾಂಕ್ ವಿತರಿಸುವ ಸಾಲಕ್ಕೆ ದಾಖಲೆ ಕೊಡಲು ಕಂದಾಯ ಇಲಾಖೆ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಟೀಕೆಗಳು ಆರೋಪಗಳಿಗೆ ಮಾತ್ರ ಸೀಮಿತವಾಗಿವೆ: ಪ್ರಧಾನಿ ಮೋದಿ

ಕಂದಾಯ ಇಲಾಖೆ ನೌಕರರ ನಡವಳಿಕೆಯಿಂದ ರೈತರ ಪರದಾಟಕ್ಕೆ ಕೋಪ ವ್ಯಕ್ತಪಡಿಸಿರುವ ಅವರು, ಸರ್ಕಾರಿ ನೌಕರರು ಮನುಷ್ಯತ್ವ ಕಳೆದುಕೊಂಡಿದ್ದಾರೆ, ಕೆಲಸ ಮಾಡದ ನೌಕಕರನ್ನು ಬಾರಿಸಲು ಶುರು ಮಾಡ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ನೌಕರರ ಸಂಘ ಬಂದು ಪ್ರತಿಭಟನೆ ಮಾಡಲಿ ನೋಡ್ತೀನಿ, ರೈತರನ್ನು ಕರೆದುಕೊಂಡು ಸೂ….ಮಕ್ಕಳನ್ನು ಸುಡಿಸಿಬಿಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಂಘರ್ಷವೇ ನಡೆದುಹೋಗಲಿ, ಜನರು ಒಳ್ಳೆಯದನ್ನು ತೀರ್ಮಾನಿಸುತ್ತಾರೆ. ಸಂಬಳ ಬೇಕು, ಬಂದೋಬಸ್ತ್ ಬೇಕು, ಅನುಕೂಲ ಬೇಕು. ಆದರೆ ರೈತರ ಕಷ್ಟ ಬೇಕಾಗಿಲ್ಲ ಎಂದು ಕೆಂಡಾಮಂಡಲರಾಗಿದ್ದಾರೆ. ಇದನ್ನೂ ಓದಿ: ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್

ಎಲ್ಲ ಕಚೇರಿಗಳಲ್ಲಿ ರೈತನನ್ನು ಸತಾಯಿಸಿದ ನಂತರ ಕೆಲಸ ಆಗುತ್ತೆ, ವಾಣಿಜ್ಯ ಬ್ಯಾಂಕ್ ಗಳಲ್ಲಿ ಸತಾಯಿಸಿದ ಬಳಿಕ ಸಾಲ ನೀಡುತ್ತಾರೆ. ಅದು ಕೆಲವೇ ಸಾವಿರ ಉಳಿಯುವುದು, ವಾಣಿಜ್ಯ ಬ್ಯಾಂಕುಗಳವರು ರೈತರ ರಕ್ತ ಕುಡಿದುಬಿಡ್ತಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ವೀಡಿಯೋ ನೋಡಿ, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ, ವಿರೋಧ ಚರ್ಚೆ ಆರಂಭವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *