ಬಾಲಿವುಡ್ ಗೆ ಹಾರಿದ ಗಾಳಿಪಟ 2 ನಿರ್ಮಾಪಕ: ಊರ್ವಶಿ ರೌಟೇಲಾ ಚಿತ್ರಕ್ಕೆ ರಮೇಶ್ ರೆಡ್ಡಿ ಬಂಡವಾಳ

Public TV
1 Min Read
urvashi rautela 3

‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಸೇರಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಎಂ. ರಮೇಶ್ ರೆಡ್ಡಿ, ತಮ್ಮ ಹೋಮ್ ಬ್ಯಾನರ್ ಸೂರಜ್ ಪ್ರೊಡಕ್ಷನ್ಸ್ ಅಡಿಯಲ್ಲಿ ಹಿಂದಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದಾರೆ. ‘ದಿಲ್ ಹೈ ಗ್ರೇ’ ಶೀರ್ಷಿಕೆಯುಳ್ಳ ಈ ಚಿತ್ರಕ್ಕೆ ಊರ್ವಶಿ ರೌಟೇಲಾ ನಾಯಕಿ ಎನ್ನುವುದು ವಿಶೇಷ. ಇದನ್ನೂ ಓದಿ : ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

urvashi rautela 1

ಶೀರ್ಷಿಕೆಯೇ ಹೇಳುವಂತೆ ಇದೊಂದು ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, ಪ್ರಧಾನ ಮೂರು ಪಾತ್ರಗಳ ಹಿನ್ನೆಲೆಯಲ್ಲಿ ಸಿನಿಮಾ ಸಾಗಲಿದೆ. ವಿನೀತ್ ಪೊಲೀಸ್ ಇನ್​ಸ್ಪೆಕ್ಟರ್ ಆಗಿ ಕಾಣಿಸಿಕೊಂಡರೆ, ಅಕ್ಷಯ್ ಆನ್​ಲೈನ್​ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುವವನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ನಾಯಕಿಯಾಗಿ ‘ಐರಾವತ’ ಖ್ಯಾತಿಯ ಊರ್ವಶಿ ರೌಟೇಲಾ ನಟಿಸಿದ್ದಾರೆ. ಸುಸಿ ಗಣೇಶನ್ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ತಾರಿಕ್ ಮಹಮ್ಮದ್, ನವೀನ್ ಪ್ರಕಾಶ್ ಚಿತ್ರದ ಬರವಣಿಗೆಯಲ್ಲಿ ಸಾಥ್ ನೀಡಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

urvashi rautela 4

ಈ ಬಗ್ಗೆ ಒಂದಷ್ಟು ಮಾಹಿತಿ ನೀಡುವ ನಿರ್ಮಾಪಕ ರಮೇಶ್ ರೆಡ್ಡಿ, ಈ ಚಿತ್ರದ ಕಥೆಯೇ ರೋಚಕವಾಗಿದೆ. ಈ ಸಿನಿಮಾದಲ್ಲಿ ಕಥೆಯೇ ಹೀರೋ. ಕ್ರೈಂ ಥ್ರಿಲ್ಲರ್ ಎಳೆಯಲ್ಲಿ ಸಾಗುವ ಈ ಸಿನಿಮಾ ಪ್ರಸ್ತುತ ಕಾಲಘಟ್ಟ ಸೂಕ್ತವಾಗಿದೆ. ಇಂಥ ಸಿನಿಮಾ ಕಟ್ಟಿಕೊಡುವಲ್ಲಿ ನಿರ್ದೇಶಕರು ಮತ್ತವರ ತಂಡ ಯಶಸ್ವಿಯಾಗಿದೆ. ಸದ್ಯ ಬಹುತೇಕ ಕೆಲಸಗಳು ಮುಕ್ತಾಯದ ಹಂತದಲ್ಲಿದೆ. ಜುಲೈನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

urvashi rautela 5

ನಿರ್ದೇಶಕ ಸುಸಿ ಗಣೇಶನ್ ಸಹ ಅಷ್ಟೇ ಎಗ್​ಸೈಟ್​ಮೆಂಟ್​ನಲ್ಲಿದ್ದಾರೆ. ಇಡೀ ಜಗತ್ತೇ ಇದೀಗ ಆನ್​ಲೈನ್ ಮಯವಾಗಿದೆ. ಆ ಆನ್​ಲೈನ್​ನಿಂದ ಅನುಕೂಲಗಳೆಷ್ಟಿವೆಯೋ ಅಷ್ಟೇ ಅನಾನುಕೂಲಗಳೂ ಇವೆ. ನಾವಿಲ್ಲಿ ಇಂಟರ್​ನೆಟ್​ನಿಂದ ಮಹಿಳೆಯರು ಎದುರಿಸುವ ಆತಂಕಕಾರಿ ಸಮಸ್ಯೆಗಳನ್ನು ತೋರಿಸಿದ್ದೇವೆ. ಸೈಬರ್ ಕ್ರೈಂನ ಮತ್ತೊಂದು ಮುಖವೂ ಅನಾವರಣಗೊಳ್ಳಲಿದೆ ಎಂದು ಮಾಹಿತಿ ನೀಡುತ್ತಾರೆ.

Share This Article
Leave a Comment

Leave a Reply

Your email address will not be published. Required fields are marked *