ಕಲಬುರಗಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ (Rameshwaram Cafe Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳ (NIA) ತಂಡ ಕಲಬುರಗಿಗೆ ಆಗಮಿಸಿದ್ದು, ಕಲಬುರಗಿಯ (Kalaburagi) ರೈಲು ನಿಲ್ದಾಣದಲ್ಲಿ ಪೋಲಿಸರು ತಪಾಸಣೆ ನಡೆಸುತ್ತಿದ್ದಾರೆ.
ಇಂದು ಬಳ್ಳಾರಿಯಿಂದ ನೇರವಾಗಿ ಬಸ್ ಮೂಲಕ ಕಲಬುರಗಿಗೆ ಆಗಮಿಸಿದ್ದು, ಸ್ಥಳೀಯ ಪೋಲಿಸರ ಜೊತೆಗೂಡಿ ನಗರದಲ್ಲಿ ಬೆಳಿಗ್ಗೆಯಿಂದ ರೈಲು ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಬಳ್ಳಾರಿಯಿಂದ ಬಸ್ ಮೂಲಕ ಹುಬ್ಬಳ್ಳಿಗೆ ಬಾಂಬರ್ ಆಗಮಿಸಿದ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಾರ್ಚ್ 13ರ ಒಳಗಡೆ 100 ಹೆದ್ದಾರಿ ಯೋಜನೆ, 10 ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ ಮೋದಿ
Advertisement
Advertisement
ರೈಲ್ವೆ ನಿಲ್ದಾಣದ ಆರ್‌ಪಿಎಫ್ ಠಾಣೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಎನ್‌ಐಎನ ಮತ್ತೊಂದು ತಂಡ ಹಳೇ ಜೇವರ್ಗಿ ರಸ್ತೆಯಲ್ಲಿ ಲಾಡ್ಜ್ ಗಳನ್ನು ಪರಿಶೀಲನೆ ನಡೆಸುತ್ತಿದೆ.